ನವದೆಹಲಿ, ಅಮೃತಸರ: ಪಂಜಾಬ್ನ ಭಾರತ– ಪಾಕಿಸ್ತಾನ ಅಂತರರಾಷ್ಟ್ರೀಯ ಗಡಿಯಲ್ಲಿ ಸೋಮವಾರ ಭಾರತದ ಗಡಿ ಭದ್ರತಾ ಪಡೆಯು (ಬಿಎಸ್ಎಫ್) ಪಾಕಿಸ್ತಾನದ ಡ್ರೋನ್ ಅನ್ನು ಹೊಡೆದುರುಳಿಸಿದೆ.
‘ಸೋಮವಾರ ರಾತ್ರಿ 8.30ರ ವೇಳೆಗೆ 183ನೇ ಬೆಟಾಲಿಯನ್ನ ಬಿಎಸ್ಎಫ್ ಪಡೆಗಳು ಪಂಜಾಬ್ನ ಅಮೃತಸರ ಸೆಕ್ಟರ್ನ ಗಡಿ ಪೋಸ್ಟ್ ಕಲಾಂ ಡೋಗರ್ನ ಪ್ರದೇಶದಲ್ಲಿ ಪಾಕಿಸ್ತಾನದ ಡ್ರೋನ್ ಅನ್ನು ಹೊಡೆದುರುಳಿಸಿದವು’ ಎಂದು ಬಿಎಸ್ಎಫ್ ವಕ್ತಾರರು ತಿಳಿಸಿದ್ದಾರೆ.
ಗಡಿಭಾಗದಲ್ಲಿ ಸತತ ನಾಲ್ಕನೇ ದಿನ ಮೂರನೇ ಬಾರಿ ಪಾಕಿಸ್ತಾನ ಡ್ರೋನ್ ಹೊಡೆದುರುಳಿಸಿದ ಪ್ರಕರಣ ಇದಾಗಿದೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.