ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್‌ ರೇಂಜರ್ಸ್‌ ಅಪ್ರಚೋದಿತ ಗುಂಡಿನ ದಾಳಿ: ಬಿಎಸ್‌ಎಫ್‌ ಯೋಧರಿಗೆ ಗಾಯ

Published 18 ಅಕ್ಟೋಬರ್ 2023, 3:06 IST
Last Updated 18 ಅಕ್ಟೋಬರ್ 2023, 3:06 IST
ಅಕ್ಷರ ಗಾತ್ರ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕ್‌ ರೇಂಜರ್ಸ್‌ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ  ಬಿಎಸ್‌ಎಫ್‌ನ ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಅರ್ನಿಯಾ ಸೆಕ್ಟರ್‌ನ ವಿಕ್ರಮ್ ಪೋಸ್ಟ್‌ನಲ್ಲಿ ಮಂಗಳವಾರ ಬೆಳಿಗ್ಗೆ 8.15 ರ ಸುಮಾರಿಗೆ ಪಾಕಿಸ್ತಾನ ರೇಂಜರ್‌ಗಳು ಸೈನಿಕರ ಮೇಲೆ ಗುಂಡು ಹಾರಿಸಿದ್ದಾರೆ. ಪ್ರತಿಯಾಗಿ ಬಿಎಸ್‌ಎಫ್ ಯೋಧರು ಕೂಡ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಹೇಳಿಕೆಯಲ್ಲಿ ತಿಳಿಸಿದೆ.

ಸ್ನೈಪರ್ ಮೂಲಕ ಯೋಧರ ಮೇಲೆ ದಾಳಿ ಮಾಡಲಾಗಿದೆ. ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT