ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು ಮತ್ತು ಕಾಶ್ಮೀರ: ಪಾಕ್‌ನಿಂದ ಅಪ್ರಚೋದಿತ ಗುಂಡಿನ ದಾಳಿ

Last Updated 26 ಸೆಪ್ಟೆಂಬರ್ 2020, 7:59 IST
ಅಕ್ಷರ ಗಾತ್ರ

ಜಮ್ಮು: ಪಾಕಿಸ್ತಾನಿ ಪಡೆಗಳು ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ನಿಯಂತ್ರಣ ರೇಖೆಯುದ್ದಕ್ಕೂ ಅಪ್ರಚೋದಿತ ಗುಂಡು ಮತ್ತು ಶೆಲ್‌ ದಾಳಿ ನಡೆಸುವ ಮೂಲಕ ಕದನ ವಿರಾಮ ಉಲ್ಲಂಘಿಸಿವೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

ನೌಶೇರಾ ಸೆಕ್ಟರ್‌ನ ಗಡಿಯುದ್ದಕ್ಕೂ ಬೆಳಿಗ್ಗೆ 11.15ರಿಂದ ಪಾಕ್‌ ಪಡೆಗಳು ಶೆಲ್‌ ಮತ್ತು ಗುಂಡಿನ ದಾಳಿ ನಡೆಸುತ್ತಿವೆ. ಇದಕ್ಕೆ ಭಾರತೀಯ ಸೇನೆ ಪ್ರತ್ಯುತ್ತರ ನೀಡುತ್ತಿದೆ ಎಂದು ಅವರು ಹೇಳಿದ್ದಾರೆ.

ಇಲ್ಲಿಯವರೆಗಿನ ವರದಿ ಪ್ರಕಾರ ಭಾರತೀಯ ಸೇನೆ ಕಡೆ ಯಾವುದೇ ಪ್ರಾಣಹಾನಿ ಅಥವಾ ಗಾಯ ಆಗಿಲ್ಲ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT