ನವದೆಹಲಿ (ಪಿಟಿಐ): 2025ರ ಏಪ್ರಿಲ್ನಲ್ಲಿ ನಡೆದ ಪಹಲ್ಗಾಮ್ ದಾಳಿಯ ನಂತರ ಪಾಕಿಸ್ತಾನವನ್ನು ರಾಜತಾಂತ್ರಿಕವಾಗಿ ಏಕಾಂಗಿಯಾಗಿಸಲು ಭಾರತ ಪ್ರಯತ್ನಿಸಿದರೂ, ಎರಡು ಯುದ್ಧನಿರತ ದೇಶಗಳ ನಡುವೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸುವುದನ್ನು ತಡೆಯುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದ್ದನ್ನು ಕಾಂಗ್ರೆಸ್ ಶನಿವಾರ ಪ್ರಶ್ನಿಸಿದೆ.

‘ಇದು ಸ್ವಯಂಘೋಷಿತ ವಿಶ್ವ ಗುರುವಿನ ಆಲಿಂಗನದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ’ ಎಂದು ಕಾಂಗ್ರೆಸ್ ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಉಲ್ಲೇಖಿಸಿ ಹೇಳಿದ್ದಾರೆ.

ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷವನ್ನು ಕೊನೆಗೊಳಿಸುವ ಗುರಿ ಹೊಂದಿರುವ ಇರಾನ್ ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಾಖಿರ್ ಖಾಲೀಬಾಫ್ ನೇತೃತ್ವದ ನಿಯೋಗದೊಂದಿಗೆ ಮಾತುಕತೆ ನಡೆಸಲು ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಅವರು ಪಾಕಿಸ್ತಾನಕ್ಕೆ ಭೇಟಿ ನೀಡುವ ಸ್ವಲ್ಪ ಸಮಯಕ್ಕೂ ಮುನ್ನ ಜೈರಾಮ್ ರಮೇಶ್ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ಇಸ್ಲಾಮಾಬಾದ್ನಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆಗಳು ಶನಿವಾರದಿಂದ ಪ್ರಾರಂಭವಾಗುತ್ತಿವೆ’ ಎಂದು ಹೇಳಿದ್ದಾರೆ.

‘ಸ್ವಯಂಘೋಷಿತ ವಿಶ್ವಗುರುವಿನ ಆಲಿಂಗನದ ರಾಜತಾಂತ್ರಿಕತೆಯ ಸಾರ ಮತ್ತು ಶೈಲಿಯ ಬಗ್ಗೆ ಗಂಭೀರ ಪ್ರಶ್ನೆಗಳು ಏಳುತ್ತಿವೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನದ ಪಾತ್ರವಿದ್ದು, ಅದನ್ನು ಏಕಾಂಗಿಯಾಗಿಸಲು ಭಾರತವು ನಡೆಸಿದ ರಾಜತಾಂತ್ರಿಕ ಹೋರಾಟದ ನಡುವೆಯೂ, ಪಾಕಿಸ್ತಾನವು ತನಗಾಗಿ ಒಂದು ಹೊಸ ಪಾತ್ರವನ್ನು ಕಂಡುಕೊಳ್ಳುವಲ್ಲಿ ಹೇಗೆ ಯಶಸ್ವಿಯಾಗಿದೆ’ ಎಂದು ಅವರು ಪ್ರಶ್ನಿಸಿದ್ದಾರೆ.

‘ಈ ವೈಫಲ್ಯವು ಅಪಾಯಕಾರಿ ಯಾದದ್ದು. ಏಕೆಂದರೆ, 2008ರ ನವೆಂಬರ್ನಲ್ಲಿ ಮುಂಬೈ ಭಯೋತ್ಪಾದಕ ದಾಳಿಯ ನಂತರ ಮನಮೋಹನ್ ಸಿಂಗ್ ಸರ್ಕಾರವು ಪಾಕಿಸ್ತಾನವನ್ನು ಪರಿಣಾಮಕಾರಿಯಾಗಿ ಏಕಾಂಗಿಯಾಗಿನ್ನಾಗಿ ಮಾಡಿತ್ತು’ ಎಂದು ಅವರು ತಿಳಿಸಿದ್ದಾರೆ.

‘ನಮಸ್ತೆ ಟ್ರಂಪ್, ಹೌಡಿ ಮೋದಿ ಮತ್ತು ಮತ್ತೊಮ್ಮೆ ಟ್ರಂಪ್ ಸರ್ಕಾರ’ದಂತಹ ಪ್ರಚಾರಗಳನ್ನು ಮೋದಿ ಅವರು ಮತ್ತು ಅವರ ಬೆಂಬಲಿಗರು ನಡೆಸಿದ ನಂತರವೂ, ಅಮೆರಿಕವು ಪಾಕಿಸ್ತಾನಕ್ಕೆ ಈ ಹೊಸ ಜವಾಬ್ದಾರಿಯನ್ನು ನೀಡಲು ಭಾರತ ಹೇಗೆ ಅನುಮತಿ ನೀಡಿತು’ ಎಂದು ಪ್ರಶ್ನಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-51-1626187728

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.