ನವದೆಹಲಿ: ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರ ಯೂಟ್ಯೂಬ್ ಚಾನೆಲ್ ಅನ್ನು ಭಾರತ ಶುಕ್ರವಾರ ನಿರ್ಬಂಧಿಸಿದೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕರ ದಾಳಿಯ ಬಳಿಕ ಪಾಕಿಸ್ತಾನದ ವಿರುದ್ಧ ತೆಗೆದುಕೊಳ್ಳುತ್ತಿರುವ ನಿರ್ಬಂಧ ಕ್ರಮಗಳನ್ನು ಭಾರತ ಮುಂದುವರಿಸಿದೆ. ರಾಷ್ಟ್ರೀಯ ಭದ್ರತೆ ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದಂತೆ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ.

ಭಾರತದ ಬಗ್ಗೆ ‘ಸುಳ್ಳು, ಪ್ರಚೋದನಕಾರಿ ಮತ್ತು ಕೋಮು ಭಾವನೆ ಕೆರಳಿಸುವ’ ಸುದ್ದಿಗಳನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್ಗಳನ್ನು ಕೇಂದ್ರ ಸರ್ಕಾರ ಇತ್ತೀಚೆಗೆ ನಿರ್ಬಂಧಿಸಿತ್ತು. ಗೃಹ ಸಚಿವಾಲಯದ ಶಿಫಾರಸಿನ ಮೇರೆಗೆ ಸರ್ಕಾರ ಈ ಕ್ರಮ ಕೈಗೊಂಡಿತ್ತು.

ಅಲ್ಲದೆ, ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಬಿಬಿಸಿ ವರದಿಗಾರಿಕೆ ಬಗ್ಗೆಯೂ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.