ಇಸ್ಲಾಮಾಬಾದ್: ಗಡಿ ನಿಯಂತ್ರಣ ರೇಖೆಯಲ್ಲಿ(ಎಲ್‌ಒಸಿ) ಭಾರತೀಯ ಸೇನೆ ಕದನ ವಿರಾಮ ಉಲ್ಲಂಘಿಸಿದೆ ಎನ್ನುವ ಆರೋಪದಡಿ ಭಾರತದ ಹಿರಿಯ ರಾಜತಾಂತ್ರಿಕ ಅಧಿಕಾರಿಯನ್ನು ಕರೆದು ಪಾಕಿಸ್ತಾನ ಎಚ್ಚರಿಕೆ ನೀಡಿದೆ.

‘ಎಲ್‌ಒಸಿಯ ಖುಯಿರಟ್ಟಾ ವಲಯದಲ್ಲಿ ಭಾರತೀಯ ಪಡೆಗಳು ಭಾನುವಾರ ನಡೆಸಿದ ವಿವೇಚನೆಯಿಲ್ಲದ ಹಾಗೂ ಅಪ್ರಚೋದಿತ ಗುಂಡಿನ ದಾಳಿಗೆ 11 ನಾಗರಿಕರು ಮೃತಪಟ್ಟಿದ್ದಾರೆ’ ಎಂದು ಪಾಕಿಸ್ತಾನದ ವಿದೇಶಾಂಗ ಕಚೇರಿ(ಎಫ್‌ಒ) ತಿಳಿಸಿದೆ. ‘ಪ್ರಸಕ್ತ ವರ್ಷದಲ್ಲಿ ಭಾರತವು 2,820 ಬಾರಿ ಕದನ ವಿರಾಮವನ್ನು ಉಲ್ಲಂಘಿಸಿದೆ. ಇದರಲ್ಲಿ 26 ನಾಗರಿಕರು ಮೃತಪಟ್ಟಿದ್ದು, 245 ನಾಗರಿಕರು ಗಾಯಗೊಂಡಿದ್ದಾರೆ’ ಎಂದು ಇಲಾಖೆ ಆರೋಪಿಸಿದೆ.

‘2003ರ ಕದನ ವಿರಾಮ ಒಪ್ಪಂದವನ್ನು ಗೌರವಿಸುವಂತೆ, ಭಾನುವಾರ ನಡೆದ ಗುಂಡಿನ ದಾಳಿಯ ತನಿಖೆ ನಡೆಸಲು ಹಾಗೂ ಎಲ್‌ಒಸಿಯಲ್ಲಿ ಮುಂದೆ ಇಂಥ ಘಟನೆಗಳು ನಡೆಯದಂತೆ ಕ್ರಮವಹಿಸಲು ಸೂಚಿಸಲು ಅಧಿಕಾರಿಗೆ ಸಮನ್ಸ್ ನೀಡಲಾಗಿದೆ’ ಎಂದು ಪ್ರಕಟಣೆಯಲ್ಲಿ ಎಫ್‌ಒ ಉಲ್ಲೇಖಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.