ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಂಕಿತ ಪಾಕಿಸ್ತಾನಿ ನುಸುಳುಕೋರನನ್ನು ಗುಂಡಿಕ್ಕಿ ಕೊಂದ ಬಿಎಸ್ಎಫ್

Published 13 ಆಗಸ್ಟ್ 2024, 6:44 IST
Last Updated 13 ಆಗಸ್ಟ್ 2024, 6:44 IST
ಅಕ್ಷರ ಗಾತ್ರ

ಜಲಂಧರ್: ಪಂಜಾಬ್‌ ಗಡಿಯ ಮೂಲಕ ಭಾರತದೊಳಗೆ ಒಳನುಸುಳಲು ಪ್ರಯತ್ನಿಸಿದ್ದ ಶಂಕಿತ ಪಾಕಿಸ್ತಾನಿ ನುಸುಳುಕೋರನನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್) ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ತರ್ನ್ ತರನ್ ಜಿಲ್ಲೆಯ ದಾಲ್ ಗ್ರಾಮದಲ್ಲಿ ಅಂತರರಾಷ್ಟ್ರೀಯ ಗಡಿಯನ್ನು ದಾಟಿ ಭಾರತದೊಳಗೆ ನುಸುಳಲು ಪ್ರಯತ್ನಿಸುವುದನ್ನು ಗಮಿಸಿದ ಕರ್ತವ್ಯದಲ್ಲಿದ್ದ ಬಿಎಸ್‌ಎಫ್ ಸಿಬ್ಬಂದಿ, ಆತನಿಗೆ ಎಚ್ಚರಿಕೆ ನೀಡಿದ್ದರು. ಆದರೆ ನುಸುಳುಕೋರನು ಗಡಿಯತ್ತ ಮುನ್ನುಗ್ಗಿದ್ದಾನೆ. ಈ ವೇಳೆ ಬಿಎಸ್‌ಎಫ್ ಪಡೆಯು ಗುಂಡಿ ಕೊಂದಿದ್ದಾರೆ ಎಂದು ಗಡಿ ಭದ್ರತಾ ಪಡೆಯ ವಕ್ತಾರರು ಹೇಳಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಭಾರತ-ಪಾಕಿಸ್ತಾನ ಗಡಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT