ಶ್ರೀನಗರ: ಪಾಕಿಸ್ತಾನಿ ಪಡೆಗಳು ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಮತ್ತೊಮ್ಮೆ ಕದನ ವಿರಾಮ ಉಲ್ಲಂಘಿಸಿದ್ದು, ಜಮ್ಮು ಮತ್ತು ಕಾಶ್ಮೀರದ ಕಮಲ್ ಕೋಟ್ ಸೆಕ್ಟರ್‌ನಲ್ಲಿ ಶನಿವಾರ ಅಪ್ರಚೋದಿತ ಗುಂಡಿನ ದಾಳಿ ನಡೆಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾಕ್ ಪಡೆಗಳು ಬೆಳಿಗ್ಗೆ 9.20ರ ಸುಮಾರಿಗೆ ಉತ್ತರ ಕಾಶ್ಮೀರದ ಬಾರಾಮುಲ್ಲ ಜಿಲ್ಲೆಯ ಉರಿ ಪ್ರದೇಶ ಕಮಲ್ ಕೋಟ್ ಸೆಕ್ಟರ್ ಮೇಲೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಈಗಲೂ ಅದು ಮುಂದುವರೆದಿದೆ. ಭಾರತೀಯ ಸೇನೆಯು ಪ್ರತಿ ದಾಳಿ ನಡೆಸುವ ಮೂಲಕ ಸೂಕ್ತ ಪ್ರತಿಕ್ರಿಯೆ ನೀಡುತ್ತಿದೆ ಎಂದು ಅವರು ಹೇಳಿದ್ದಾರೆ.

ಶುಕ್ರವಾರವೂ ಪಾಕ್ ಪಡೆಗಳು ಕದನ ವಿರಾಮ ಉಲ್ಲಂಘಿಸಿ ನಡೆಸಿದ ಶೆಲ್ ದಾಳಿಗೆ ರಾಂಪುರ ಸೆಕ್ಟರ್‌ನಲ್ಲಿ 48 ವರ್ಷದ ಅಖ್ತರ್ ಬೇಗಂ ಎಂಬುವರು ಅವರ ಮನೆಯಲ್ಲೇ ಮೃತಪಟ್ಟಿದ್ದರು. 23 ವರ್ಷದ ಯುವತಿಯೊಬ್ಬರು ಈ ದಾಳಿಯಲ್ಲಿ ಗಾಯಗೊಂಡಿದ್ದರು.

ಪಾಕ್ ಪಡೆಗಳ ಅಪ್ರಚೋದಿತ ಗುಂಡಿನ ದಾಳಿಯಿಂದ ನಾಲ್ಕು ಮನೆಗಳು ಮತ್ತು ಒಂದು ಮಸೀದಿಗೆ ಹಾನಿಯಾಗಿದೆ. ಇಲ್ಲಿನ ಹಲವು ಕುಟುಂಬಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.