ಲಖನೌ: ಉತ್ತರ ಪ್ರದೇಶದ ರಾಯ್ ಬರೇಲಿ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯೊಂದರಲ್ಲಿ ಶಿಕ್ಷಕಿ ಹುದ್ದೆ ಗಿಟ್ಟಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ ಮೇಲೆ ಪಾಕಿಸ್ತಾನ ಮೂಲದ ಮಹಿಳೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.

2015ರಿಂದ ಮಾಧೋಪುರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವುದಾಗಿ ಮಹಿಳೆ ಹೇಳಿಕೊಂಡಿದ್ದರು. ಫತೇಗಂಜ್ನ ಶಿಕ್ಷಣಾಧಿಕಾರಿ ನೀಡಿದ ದೂರಿನ ಮೇರೆಗೆ ಮಹಿಳೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮುಖೇಶ್ ಚಂದ್ರ ಮಿಶ್ರಾ ತಿಳಿಸಿದ್ದಾರೆ.

ಶುಮೈಲಾ ಖಾನ್ ಅವರು ಮಾಧೋಪುರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿ ಹುದ್ದೆಯನ್ನು ಪಡೆಯಲು ನಕಲಿ ದಾಖಲೆಗಳನ್ನು ಸಲ್ಲಿಸಿರುವುದು ದೃಢಪಟ್ಟಿದೆ ಎಂದು ಮಿಶ್ರಾ ವಿವರಿಸಿದ್ದಾರೆ.

ಶುಮೈಲಾ ಖಾನ್ ಅವರು ನೇಮಕಾತಿ ಪ್ರಕ್ರಿಯೆ ವೇಳೆ ದಾಖಲೆಗಳನ್ನು ಸಲ್ಲಿಸಿದ್ದರು. ಆದರೆ, ತನಿಖೆಯಲ್ಲಿ ಅವು ನಕಲಿ ದಾಖಲೆ ಎಂದು ತಿಳಿದುಬಂದಿದೆ. ಜತೆಗೆ, ಶುಮೈಲಾ ಪಾಕಿಸ್ತಾನ ಮೂಲದವರು ಎಂದೂ ದೃಢಪಟ್ಟಿರುವುದಾಗಿ ಮಿಶ್ರಾ ತಿಳಿಸಿದ್ದಾರೆ.

ಶಿಕ್ಷಣ ಇಲಾಖೆಯು ಅನೇಕ ಸಂದರ್ಭಗಳಲ್ಲಿ ಶುಮೈಲಾ ಖಾನ್ ಅವರಿಂದ ಸ್ಪಷ್ಟೀಕರಣ ಕೇಳಿತ್ತು. ಆದರೆ, ಪ್ರತಿ ಬಾರಿಯೂ ನಕಲಿ ದಾಖಲೆಗಳನ್ನೇ ಸಲ್ಲಿಸಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.

2024ರ ಅಕ್ಟೋಬರ್ 3ರಂದು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ವರದಿಯ ಮೇರೆಗೆ ಶುಮೈಲಾ ಖಾನ್ ಅವರನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ. ಸದ್ಯ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.