ಮುಂಬೈ: ಖ್ಯಾತ ಸಂಗೀತ ನಿರ್ದೇಶಕ ಪಲಾಶ್ ಮುಚ್ಚಲ್ ವಿರುದ್ಧ ಜಾತಿ ನಿಂದನೆ ಆರೋಪ ಕೇಳಿ ಬಂದಿದೆ.ಈ ಸಂಬಂಧ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಪಲಾಶ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಭಾರತ ತಂಡದ ಅನುಭವಿ ಆಟಗಾರ್ತಿ ಸ್ಮೃತಿ ಮಂದಾನ ಅವರ ಬಾಲ್ಯದ ಸ್ನೇಹಿತ ವಿದ್ಯಾನ್ ಪ್ರಕಾಶ್ ಮಾನೆ ಎಂಬುವರು ಈ ದೂರು ನೀಡಿದ್ದಾರೆ .

ಏನಿದು ಪ್ರಕರಣ?

ಮಾನೆ ಅವರ ದೂರಿನ ಅನ್ವಯ, ನವೆಂಬರ್ 22ರಂದು ಸಾಂಗ್ಲಿ-ಅಷ್ಟಾ ರಸ್ತೆಯ ಟೋಲ್ ಪ್ಲಾಜಾ ಬಳಿ ಈ ಘಟನೆ ನಡೆದಿದೆ. ಹಣಕಾಸಿನ ವಿಚಾರವಾಗಿ ನಡೆದ ವಾಗ್ವಾದದಲ್ಲಿ ಪಲಾಶ್ ಅವರು ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿಲಾಗಿದೆ. ಈ ಸಂಬಂಧ ಸಾಂಗ್ಲಿ ನಗರ ಪೊಲೀಸರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3(1), 351(2), ಮತ್ತು 352 ರ ಅಡಿಯಲ್ಲಿ ಪ್ರಕರಣ ದಾಖಲಿಸಿದರು. ಸದ್ಯ ಪೊಲೀಸರು ಪಲಾಶ್ ವಿರುದ್ಧ ತನಿಖೆ ಆರಂಭಿಸಿದ್ದಾರೆ.

ವರದಿಗಳ ಪ್ರಕಾರ, ಪಲಾಶ್ ಅವರು ಸಿನಿಮಾ ನಿರ್ಮಾಣಕ್ಕಾಗಿ ವಿಜ್ಞಾನ್ ಅವರಿಂದ ₹25 ಲಕ್ಷ ಹಣ ಪಡೆದಿದ್ದರು ಎನ್ನಲಾಗಿದೆ. ಆರು ತಿಂಗಳಲ್ಲಿ ಸಿನಿಮಾ ಮುಗಿಸಿಕೊಡುವುದಾಗಿ ಭರವಸೆ ನೀಡಿ ವಂಚಿಸಿದ್ದಾರೆ ಎಂದು ದೂರುದಾರರು ದೂರಿದ್ದಾರೆ. ‘ಹಣ ವಾಪಸ್ ಕೇಳಲು ಹೋದಾಗ ಅವರು ಅಸಭ್ಯವಾಗಿ ವರ್ತಿಸಿ, ಹೇಳಿಕೊಳ್ಳಲು ಆಗದಂತಹ ಪದ ಪ್ರಯೋಗಿಸಿ ಜಾತಿ ನಿಂದನೆ ಮಾಡಿದ್ದಾರೆ’ ಎಂದು ವಿಜ್ಞಾನ್ ತಿಳಿಸಿದ್ದಾರೆ.

2025ರ ನವೆಂಬರ್ನಲ್ಲಿ ಪಲಾಶ್ ಮತ್ತು ಸ್ಮೃತಿ ಮಂದಾನ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇವರ ವಿವಾಹ ಸಾಂಗ್ಲಿಯಲ್ಲಿ ನಡೆಯಬೇಕಿತ್ತು. ಆದರೆ ಮದುವೆಗೆ ಇನ್ನೂ ಎರಡು ದಿನ ಬಾಕಿ ಇರುವಾಗಲೇ ಮದುವೆ ರದ್ದುಗೊಳಿಸಿದ್ದರು. ಈಗ ಹಣಕಾಸಿನ ವಿವಾದ ಹಾಗೂ ಜಾತಿ ನಿಂದನೆ ಪ್ರಕರಣ ಪಲಾಶ್ಗೆ ಸಂಕಷ್ಟ ತಂದೊಡ್ಡಿದೆ. ಸದ್ಯ ಪೊಲೀಸರು ಈ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.