ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಉತ್ತರ ಪ್ರದೇಶ | ಪ್ಯಾಲೆಸ್ಟೀನ್‌ ಧ್ವಜ ಪ್ರದರ್ಶಿಸಿದ ವ್ಯಕ್ತಿ ಬಂಧನ

Published 9 ಜುಲೈ 2024, 15:35 IST
Last Updated 9 ಜುಲೈ 2024, 15:35 IST
ಅಕ್ಷರ ಗಾತ್ರ

ಭದೋಹಿ: ಮೊಹರಂ ತಿಂಗಳ ಚಂದ್ರ ದರ್ಶನದ ಬಳಿಕ ನಡೆದ ಮೆರವಣಿಗೆಯಲ್ಲಿ ಪ್ಯಾಲೆಸ್ಟೀನ್‌ ಧ್ವಜ ಪ್ರದರ್ಶಿಸಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬೆನ್ನಲ್ಲೇ, ವ್ಯಕ್ತಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದರು.

‘ಕೆಲ ಯುವಕರು ಅನುಮತಿ ಪಡೆಯದೆ ಮಾಧೋಸಿಂಗ್‌ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ  ಮೆರವಣಿಗೆ ನಡೆಸಿದ್ದಾರೆ. ಈ ವೇಳೆ ಪ್ಯಾಲೆಸ್ಟೀನ್ ಧ್ವಜ ಪ್ರದರ್ಶಿಸಿ, ಘೋಷಣೆಗಳನ್ನು ಕೂಗಲಾಗಿತ್ತು’ ಎಂದು ಔರಾಯಿ ಪೊಲೀಸ್‌ ಠಾಣೆಯ ಎಸ್‌ಎಚ್‌ಒ ಸಚ್ಚಿದಾನಂದ ಪಾಂಡೆ ಹೇಳಿದರು.

‘ವಿಡಿಯೊ ಜಾಲತಾಣಗಳಲ್ಲಿ ಹರಿದಾಡಿದ ಬೆನ್ನಲ್ಲೇ ತನಿಖೆ ಚುರುಕುಗೊಳಿಸಿ, ಸಾಹಿಲ್‌ ಅಲಿಯಾಸ್ ಬಾದ್‌ಶಾ ಮತ್ತು ಗೋರಖ್‌ ಎಂಬವರನ್ನು ಆರೋಪಿಗಳೆಂದು ಗುರುತಿಸಲಾಯಿತು. ಸಾಹಿಲ್ ಅವರನ್ನು ಸೋಮವಾರ ರಾತ್ರಿ ಬಂಧಿಸಲಾಗಿದೆ. ಗೋರಖ್‌ ಅವರ ಪತ್ತೆಗೆ ಶೋಧ ನಡೆಸಲಾಗುತ್ತಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT