‘ಛತ್ರಪತಿ ಶಿವಾಜಿ ಮಹಾರಾಜರ ವ್ಯಕ್ತಿತ್ವಕ್ಕೆ ತಕ್ಕಂತೆ ಹೊಸ ಪ್ರತಿಮೆಯನ್ನು ನಿರ್ಮಿಸಲು ಸರ್ಕಾರ ಸಮಿತಿಯನ್ನು ರಚಿಸಿದೆ. ಪಕ್ಷದ ಸಚಿವರು, ಅಧಿಕಾರಿಗಳು ಮತ್ತು ನೌಕಾಪಡೆಯ ಅಧಿಕಾರಿಗಳೊಂದಿಗೆ ತಮ್ಮ ನಿವಾಸ ‘ವರ್ಷ’ದಲ್ಲಿ ಸಭೆ ನಡೆಸಿದ ಬಳಿಕ ಸಿಎಂ ಏಕನಾಥ್ ಶಿಂಧೆ ಈ ನಿರ್ಧಾರ ಕೈಗೊಂಡಿದ್ದಾರೆ’ ಎಂದು ಮುಖ್ಯಮಂತ್ರಿ ಕಚೇರಿಯ ಪ್ರಕಟಣೆ ತಿಳಿಸಿದೆ.
2023ರ ಡಿಸೆಂಬರ್ 4ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದ 35 ಅಡಿ ಎತ್ತರದ ಶಿವಾಜಿ ಮಹಾರಾಜರ ಪ್ರತಿಮೆ ಸೋಮವಾರ (ಆಗಸ್ಟ್ 26) ಕುಸಿದು ಬಿದ್ದಿತ್ತು. ಘಟನೆ ಸಂಬಂಧ, ಪ್ರತಿಮೆ ನಿರ್ಮಾಣದ ಗುತ್ತಿಗೆದಾರ ಹಾಗೂ ವಿನ್ಯಾಸಗಾರನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.