ಮುಂಬೈ: ವಿಚಾರವಾದಿ ಗೋವಿಂದ ಪನ್ಸಾರೆ ಹತ್ಯೆ ಪ್ರಕರಣದ ತನಿಖಾಧಿಕಾರಿಯನ್ನು ಬದಲಿಸುವಂತೆ ಕೋರಿ ಪನ್ಸಾರೆ ಕುಟುಂಬದವರು ಶುಕ್ರವಾರ ಬಾಂಬೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.

ಕೊಲ್ಹಾಪುರದಲ್ಲಿ ಪನ್ಸಾರೆ ಅವರ ಮನೆಯ ಬಳಿಯೇ 2015ರ ಫೆಬ್ರುವರಿ 16ರಂದು ಅವರ ಮೇಲೆ ಗುಂಡು ಹಾರಿಸಲಾಗಿತ್ತು. ನಾಲ್ಕು ದಿನಗಳವರೆಗೆ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದರು. ಈ ಕುರಿತು ತನಿಖೆಗೆ ಮಹಾರಾಷ್ಟ್ರ ಸರ್ಕಾರ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿತ್ತು.

‘ತನಿಖಾಧಿಕಾರಿಯ ಕೆಲಸಗಳು ತೃಪ್ತಿದಾಯಕವಾಗಿಲ್ಲ. ಹಾಗಾಗಿ ತನಿಖಾಧಿಕಾರಿಯನ್ನು ಬದಲಿಸಿ’ ಎಂದು ಪನ್ಸಾರೆ ಕುಟುಂಬ ಕೋರ್ಟ್ಗೆ ಮನವಿ ಮಾಡಿದೆ.

ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಸಿ. ಧರ್ಮಾಧಿಕಾರಿ ಮತ್ತು ಆರ್.ಐ. ಛಾಗ್ಲಾ ಅವರನ್ನೊಳಗೊಂಡ ವಿಭಾಗೀಯ ಪೀಠ, ಅರ್ಜಿದಾರರ ಈ ರೀತಿಯ ಮನವಿ ತನಿಖೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು’ ಎಂದು ಎಚ್ಚರಿಸಿತು.

ಈ ಕುರಿತು ಡಿಸೆಂಬರ್ 19ರಂದು ಪ್ರತಿಕ್ರಿಯೆಯನ್ನು ದಾಖಲಿಸುವುದಾಗಿ ತನಿಖಾ ಏಜೆನ್ಸಿ ಪರ ವಕೀಲರು ಕೋರ್ಟ್ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.