ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪ್ಪಾ.. ನೀನು ನನ್ನೊಂದಿಗೆ ಇದ್ದೀಯಾ: ತಂದೆ ರಾಜೀವ್ ಸ್ಮರಿಸಿದ ರಾಹುಲ್ ಗಾಂಧಿ

Published 21 ಮೇ 2024, 9:41 IST
Last Updated 21 ಮೇ 2024, 9:41 IST
ಅಕ್ಷರ ಗಾತ್ರ

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 32ನೇ ಪುಣ್ಯತಿಥಿಯಂದು ಅವರನ್ನು ಸ್ಮರಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಅಗಲಿದ ತಂದೆಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ತಂದೆಯ ಕುರಿತಂತೆ ‘ಎಕ್ಸ್‌’ನಲ್ಲಿ ವಿಡಿಯೊವೊಂದನ್ನು ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ‘ಅಪ್ಪ.. ಒಂದು ಸ್ಪೂರ್ತಿಯಾಗಿ ನನ್ನ ನೆನಪುಗಳಲ್ಲಿ ಯಾವಾಗಲೂ ನೀವು ಇದ್ದೀರಿ’ ಎಂದು ಬರೆದುಕೊಂಡಿದ್ದಾರೆ.

ಅಲ್ಲದೇ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಅಪ್ಪನ ಜೊತೆಗೆ ಕಳೆದ ಕ್ಷಣಗಳನ್ನು ಹಂಚಿಕೊಂಡಿರುವ ಅವರು, ‘ನಿಮ್ಮ ಕನಸುಗಳೆಲ್ಲವೂ ನನ್ನ ಕನಸುಗಳು. ನಿಮ್ಮ ಆಕಾಂಕ್ಷೆಗಳೆಲ್ಲವೂ ನನ್ನ ಜವಾಬ್ದಾರಿಗಳು. ನಿಮ್ಮ ನೆನಪುಗಳು, ಇಂದು ಎಂದೆಂದಿಗೂ ನನ್ನ ಹೃದಯದಲ್ಲಿ ಇರುತ್ತದೆ’ ಎಂದು ಹೇಳಿದ್ದಾರೆ.

ಇಂದಿರಾ ಗಾಂಧಿ ಹತ್ಯೆ ಬಳಿಕ ದೇಶದ ಪ್ರಧಾನಿಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ರಾಜೀವ್ ಗಾಂಧಿ ಅವರು 1984ರಿಂದ 1989ರವರೆಗೆ ಆಡಳಿತ ನಡೆಸಿದ್ದರು. ಅತ್ಯಂತ ಕಿರಿಯ ವಯಸ್ಸಿಗೆ ಪ್ರಧಾನಿಯಾಗಿದ್ದ ಅವರು ಹಲವು ಪ್ರಮುಖ ಯೋಜನೆಗಳನ್ನು ಜಾರಿಗೆ ತಂದಿದ್ದರು. 1991ರ ಮೇ 21ರಂದು ತಮಿಳುನಾಡಿನ ಶ್ರೀಪೆರಂಬುದೂರಿನಲ್ಲಿ ‌ಚುನಾವಣಾ ಪ್ರಚಾರ ನಡೆಸುವಾಗ ರಾಜೀವ್ ಅವರ ಮೇಲೆ ಆತ್ಮಹತ್ಯಾ ಬಾಂಬ್‌ ದಾಳಿ ನಡೆದಿತ್ತು.

ಧನು ಎಂಬಾಕೆ ಬಾಂಬ್‌ ಸ್ಫೋಟಿಸಿಕೊಂಡು, ರಾಜೀವ್ ಅವರ ಹತ್ಯೆ ಮಾಡಿದ್ದಳು. ಹಂತಕರಾದ ಎ.ಜಿ.ಪೇರರಿವಾಳನ್‌, ನಳಿನಿ ಶ್ರೀಹರನ್‌, ಆಕೆಯ ಪತಿ ಮುರುಗನ್‌, ಶಾಂತನ್‌, ರಾಬರ್ಟ್ ಪಿಯಸ್, ಜಯಕುಮಾರ್ ಹಾಗೂ ರವಿಚಂದ್ರನ್ ಈ ಹತ್ಯೆಗೆ ಸಂಚು ರೂಪಿಸಿದ್ದರು.

1998ರಲ್ಲಿ ತಮಿಳುನಾಡಿನ ವಿಚಾರಣಾ ನ್ಯಾಯಾಲಯವು ಎಲ್ಲಾ ಹಂತಕರಿಗೆ ಮರಣದಂಡನೆ ಘೋಷಿಸಿತ್ತು. 2014ರಲ್ಲಿ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಯಾಗಿ ಮಾರ್ಪಡಿಸಲಾಗಿತ್ತು. 2022ರಲ್ಲಿ ಸುಪ್ರೀಂ ಕೋರ್ಟ್‌ ತೀರ್ಪಿನ ಮೇರೆಗೆ ಎಲ್ಲಾ ಅಪರಾಧಿಗಳನ್ನು ಅವಧಿಪೂರ್ವವಾಗಿ ಬಿಡುಗಡೆ ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT