ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಣ್ಣಿನ ವಿವಾಹದ ಕನಿಷ್ಠ ವಯಸ್ಸು ಏರಿಕೆ: ಸಮಿತಿಗೆ ನೀಡಿದ್ದ ಗಡುವು ವಿಸ್ತರಣೆ

Published 18 ಅಕ್ಟೋಬರ್ 2023, 13:50 IST
Last Updated 18 ಅಕ್ಟೋಬರ್ 2023, 13:50 IST
ಅಕ್ಷರ ಗಾತ್ರ

ನವದೆಹಲಿ: ಹೆಣ್ಣಿನ ವಿವಾಹದ ಕನಿಷ್ಠ ವಯಸ್ಸನ್ನು 18ರಿಂದ 21ಕ್ಕೆ ಏರಿಸುವ ಮಸೂದೆಯನ್ನು ಪರಿಶೀಲಿಸುತ್ತಿರುವ ಸಂಸದೀಯ ಸಮಿತಿಗೆ ವರದಿ ಸಲ್ಲಿಸಲು ನೀಡಿದ್ದ ಗಡುವನ್ನು ಮತ್ತೆ ಮೂರು ತಿಂಗಳು ವಿಸ್ತರಿಸಲಾಗಿದೆ.

ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕರ್‌ ಅವರು, ಸಮಿತಿಗೆ ಮಸೂದೆಯನ್ನು ಪರಿಶೀಲಿಸಿ ವರದಿ ಸಲ್ಲಿಸಲು ನೀಡಿದ್ದ ಗಡುವನ್ನು 2024ರ ಜನವರಿ 24ರವರೆಗೆ ವಿಸ್ತರಿಸಿದ್ದಾರೆ ಎಂದು ರಾಜ್ಯಸಭೆಯ ಪ್ರಕಟಣೆಯಲ್ಲಿ ಮಂಗಳವಾರ ತಿಳಿಸಲಾಗಿದೆ.

ಇದಕ್ಕೂ ಮುನ್ನ ಸಹ ವರದಿ ಸಲ್ಲಿಸಲು ನೀಡಿದ್ದ ಗಡುವನ್ನು ವಿಸ್ತರಿಸಲಾಗಿತ್ತು.

2021ರ ಡಿಸೆಂಬರ್‌ನಲ್ಲಿ ಲೋಕಸಭೆಯಲ್ಲಿ ಬಾಲ್ಯ ವಿವಾಹ ನಿಷೇಧ (ತಿದ್ದುಪಡಿ) ಮಸೂದೆ–2021 ಮಂಡಿಸಲಾಗಿತ್ತು. ಬಳಿಕ ಇದನ್ನು ಶಿಕ್ಷಣ, ಮಹಿಳೆ, ಮಕ್ಕಳು, ಯುವಜನತೆ ಮತ್ತು ಕ್ರೀಡೆ ಕುರಿತ ಸ್ಥಾಯಿ ಸಮಿತಿಗೆ ಒಪ್ಪಿಸಲಾಗಿತ್ತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT