ಮುಂಬೈ: ‘ಇಲ್ಲಿನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರು ಸೋಮವಾರ ಮಹಾರಾಷ್ಟ್ರದ ಗೃಹರಕ್ಷಕ ದಳದ (ಹೋಂ ಗಾರ್ಡ್) ಮಹಾನಿರ್ದೇಶಕರಾಗಿ (ಡಿಜಿ) ಅಧಿಕಾರ ವಹಿಸಿಕೊಂಡರು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉದ್ಯಮಿ ಮುಕೇಶ್ ಅಂಬಾನಿ ಅವರ ಮನೆ ಬಳಿ ಸ್ಫೋಟಕಗಳಿದ್ದ ವಾಹನ ಪತ್ತೆ ಪ್ರಕರಣವನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಲು ವಿಫಲರಾಗಿದ್ದಾರೆ ಎಂಬ ಕಾರಣಕ್ಕೆ ಸಿಂಗ್ ಅವರನ್ನು ಪೊಲೀಸ್ ಆಯುಕ್ತರ ಸ್ಥಾನದಿಂದಮಾರ್ಚ್ 17ರಂದು ಎತ್ತಂಗಡಿ ಮಾಡಲಾಗಿತ್ತು.ಅಲ್ಲದೆ ಆ ಸ್ಥಾನಕ್ಕೆ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಗ್ರಾಲೆ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು.

ಇದಾದ ಮರುದಿನವೇ ಸಿಂಗ್ ಅವರು ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದಿದ್ದರು.

‘ಅನಿಲ್ ದೇಶ್ಮುಖ್ ಅವರು ಮುಂಬೈನ ಬಾರ್ ಮತ್ತು ರೆಸ್ಟೋರೆಂಟ್ಗಳಿಂದ ₹50 ರಿಂದ ₹60 ಕೋಟಿ ಸೇರಿದಂತೆ ಪ್ರತಿ ತಿಂಗಳು ₹100 ಕೋಟಿ ಸಂಗ್ರಹಿಸುವಂತೆ ಎನ್ಐಎ ಕಸ್ಟಡಿಯಲ್ಲಿರುವ ಸಚಿನ್ ವಾಜೆ ಮತ್ತು ಇತರ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು’ ಎಂದು ಸಿಂಗ್ ಪತ್ರದಲ್ಲಿ ದೂರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.