ದೋಷಿಗೆ ಜೀವಾವಧಿ
ವೈದ್ಯೆ ಮೇಲೆ ಅತ್ಯಾಚಾರ ನಡೆಸಿ, ಹತ್ಯೆ ಮಾಡಿದ ಪ್ರಕರಣದಲ್ಲಿ ಸಂಜಯ್ ರಾಯ್ ದೋಷಿ ಎಂದು ತೀರ್ಪು ನೀಡಿದ್ದ ಸಿಯಾಲದಹದಲ್ಲಿರುವ ನ್ಯಾಯಾಲಯ, ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕಳೆದ ವಾರ ಆದೇಶಿಸಿದೆ. ಆದರೆ, ಆತನಿಗೆ ಮರಣದಂಡನೆ ವಿಧಿಸಬೇಕು ಎಂಬ ಕೂಗು ಎದ್ದಿದೆ. ಸಿಬಿಐ ಸಹ ಕಲ್ಕತ್ತ ಹೈಕೋರ್ಟ್ ಮೆಟ್ಟಿಲೇರಿದ್ದು, ಗಲ್ಲು ಶಿಕ್ಷೆಗೆ ಮನವಿ ಮಾಡಿದೆ.