ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜ.29ರಂದು ‘ಪರೀಕ್ಷಾ ಪೇ ಚರ್ಚಾ 2024’ ಕಾರ್ಯಕ್ರಮ: ಈವರೆಗೆ 1 ಕೋಟಿ ಜನರ ನೋಂದಣಿ

Published 5 ಜನವರಿ 2024, 14:34 IST
Last Updated 5 ಜನವರಿ 2024, 14:40 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ವಿದ್ಯಾರ್ಥಿ, ಶಿಕ್ಷಕರೊಂದಿಗೆ ಸಂವಾದ ನಡೆಸುವ ವಾರ್ಷಿಕ ‘ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮದ 7ನೇ ಆವೃತ್ತಿ ಜ. 29 ರಂದು ನಡೆಯಲಿದೆ. ‌

ಈ ಕಾರ್ಯಕ್ರಮದಲ್ಲಿ ಭಾಗವಹಿಸಲು MyGov ಪೋರ್ಟಲ್‌ನಲ್ಲಿ ಈವರೆಗೆ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಸೇರಿ ಒಟ್ಟು 1 ಕೊಟಿ ಜನ ನೋಂದಣಿ ಮಾಡಿದ್ದಾರೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ಶುಕ್ರವಾರ ತಿಳಿಸಿದೆ.

ಮುಂಬರುವ ವಾರ್ಷಿಕ ಪರೀಕ್ಷೆಯನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮವನ್ನು ಪ್ರಧಾನಿ ಮೋದಿ ಅವರು ನಡೆಸಿಕೊಡುತ್ತಾರೆ. ಇಲ್ಲಿ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರೊಂದಿಗೆ ಚರ್ಚೆ ನಡೆಸುತ್ತಾರೆ. ವಿದ್ಯಾರ್ಥಿಗಳು ಕೇಳುವ ಪರೀಕ್ಷೆ ಒತ್ತಡ ಹಾಗೂ ಇತರ ಪ್ರಶ್ನೆಗಳಿಗೆ ಉತ್ತರಿಸುತ್ತಾರೆ.

ಈ ಬಾರಿ ನಡೆಯುವ 7ನೇ ಆವೃತ್ತಿಯ ಕಾರ್ಯಕ್ರಮವನ್ನು ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಲಾಗಿದೆ. ಸುಮಾರು 4 ಸಾವಿರ ವಿದ್ಯಾರ್ಥಿಗಳು ಉಪಸ್ಥಿತರಿರುವ ಸಾಧ್ಯತೆ ಇದೆ.  ಜತೆಗೆ ಪ್ರತಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಿಂದ ಇಬ್ಬರು ವಿದ್ಯಾರ್ಥಿಗಳು ಮತ್ತು ಒಬ್ಬ ಶಿಕ್ಷಕರು ಮತ್ತು ಕಲಾ ಉತ್ಸವ ಮತ್ತು ವೀರ ಗಾಥಾ ಸ್ಪರ್ಧೆಯ ವಿಜೇತರನ್ನು ಮುಖ್ಯ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಗಳಾಗಿ ಆಹ್ವಾನಿಸಬಹುದು ಎಂದು ಸಚಿವಾಲಯ ತಿಳಿಸಿದೆ.

ಜ.5ಕ್ಕೆ ಅನ್ವಯಿಸುವಂತೆ 90 ಲಕ್ಷ ವಿದ್ಯಾರ್ಥಿಗಳು, 8 ಲಕ್ಷ ಶಿಕ್ಷಕರು ಹಾಗೂ 2 ಲಕ್ಷ ಪೋಷಕರು ನೋಂದಣಿಯಾಗಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT