ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೂತನ ಸಂಸತ್ ಭವನ ರಾಷ್ಟ್ರಪತಿಯವರಿಂದಲೇ ಲೋಕಾರ್ಪಣೆಯಾಗಲಿ: ಸುಪ್ರೀಂಕೋರ್ಟ್‌ಗೆ ಮನವಿ

Published 25 ಮೇ 2023, 10:17 IST
Last Updated 25 ಮೇ 2023, 10:17 IST
ಅಕ್ಷರ ಗಾತ್ರ

ನವದೆಹಲಿ: ಹೊಸದಾಗಿ ನಿರ್ಮಿಸಲಾಗಿರುವ ಸಂಸತ್‌ ಭವನವನ್ನು ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಲೋಕಾರ್ಪಾಣೆ ಮಾಡುವಂತೆ ನಿರ್ದೇಶನ ನೀಡಬೇಕು ಎಂದು ಕೋರಿ ಸುಪ್ರೀಂಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಲಾಗಿದೆ.

ಪ್ರಧಾನಿ ಮೋದಿ ಅವರು ಮೇ 28ರಂದು (ಭಾನುವಾರ) ನೂತನ ಸಂಸತ್‌ ಭವನವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಇದನ್ನು ಟೀಕಿಸಿರುವ ವಿರೋಧ ಪಕ್ಷಗಳು, ಸಂಸತ್‌ ಭವನದ ಉದ್ಘಾಟನಾ ಸಮಾರಂಭಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಅಹ್ವಾನಿಸದಿರುವುದು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಮಾಡುವ ಅವಮಾನ ಎಂದು ಆರೋಪಿಸಿವೆ.

ಕಾಂಗ್ರೆಸ್‌, ಆಮ್‌ ಆದ್ಮಿ ಪಕ್ಷ (ಎಎಪಿ), ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಹಾಗೂ ಸಮಾಜವಾದಿ ಪಕ್ಷ (ಎಸ್‌ಪಿ) ಸೇರಿದಂತೆ 19 ವಿರೋಧ ಪಕ್ಷಗಳು, ಸಂಸತ್‌ ಭವನದ ಉದ್ಘಾಟನಾ ಸಮಾರಂಭ ಬಹಿಷ್ಕರಿಸುವುದಾಗಿ ಘೋಷಿಸಿವೆ.

ಇದರ ನಡುವೆ ಸುಪ್ರೀಂಕೋರ್ಟ್‌ಗೆ ಸಲ್ಲಿಕೆಯಾಗಿರುವ ಪಿಐಎಲ್‌ನಲ್ಲಿ, ಸಂಸತ್‌ ಭವನವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬದಲು ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಲೋಕಾರ್ಪಾಣೆ ಮಾಡುವಂತೆ ನಿರ್ದೇಶನ ನೀಡಬೇಕು ಮನವಿ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT