ನವದೆಹಲಿ: ಪಹಲ್ಗಾಮ್ ದಾಳಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ, ಆಪರೇಷನ್ ಸಿಂಧೂರ, ಭಾರತ–ಪಾಕ್ ಕದನ ವಿರಾಮ ಕುರಿತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪದೇ ಪದೇ ನೀಡುತ್ತಿರುವ ಹೇಳಿಕೆಗಳು ಮತ್ತು ಬಿಹಾರದಲ್ಲಿ ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ (ಎಸ್ಐಆರ್) ಸೇರಿದಂತೆ ಹಲವು ವಿಷಯಗಳನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಲು ವಿರೋಧ ಪಕ್ಷಗಳು ಸಜ್ಜಾಗಿವೆ.

ಹೀಗಾಗಿ, ಸೋಮವಾರ ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಕಾವೇರಿದ ಚರ್ಚೆ, ಕೋಲಾಹಲ ನಡೆಯುವ ಎಲ್ಲ ಸಾಧ್ಯತೆಗಳಿವೆ.

ಸಂಸತ್ತಿನ ಕಲಾಪ ಸುಗಮವಾಗಿ ನಡೆಯಲು ಸರ್ಕಾರವು ವಿರೋಧ ಪಕ್ಷಗಳ ಸಹಕಾರ ಕೋರಿದೆ. ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ನೇತೃತ್ವದಲ್ಲಿ ಭಾನುವಾರ ನಡೆದ ಸರ್ವಪಕ್ಷಗಳ ಸಭೆಯಲ್ಲಿ ವಿರೋಧ ಪಕ್ಷಗಳು ಹಲವು ವಿಷಯಗಳನ್ನು ಪ್ರಸ್ತಾಪಿಸಿ, ಚರ್ಚೆಗೆ ಅವಕಾಶ ನೀಡಬೇಕೆಂದು ಕೋರಿವೆ.

ಅಹಮದಾಬಾದ್ ವಿಮಾನ ದುರಂತ, ಕೊಳೆಗೇರಿಗಳ ತೆರವು ಕಾರ್ಯಾಚರಣೆ, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಂಗಾಳಿ ಭಾಷಿಕರನ್ನು ಗುರಿಯಾಗಿಸುವುದು ಹಾಗೂ ಒಡಿಶಾದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿರುವ ವಿಷಯಗಳ ಕುರಿತೂ ಚರ್ಚೆಗೆ ಅವಕಾಶ ನೀಡುವಂತೆ ವಿಪಕ್ಷಗಳು ಒತ್ತಾಯಿಸಿವೆ.

ಸರ್ವ ಪಕ್ಷಗಳ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ‘ಸಭೆ ಅತ್ಯಂತ ರಚನಾತ್ಮಕವಾಗಿ ನಡೆಯಿತು. ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳು ಸಮನ್ವಯದೊಂದಿಗೆ ಒಟ್ಟಾಗಿ ಕೆಲಸ ಮಾಡಬೇಕಿದೆ’ ಎಂದು ಹೇಳಿದರು.

‘ವಿವಿಧ ಪಕ್ಷಗಳು ಸಭೆಯಲ್ಲಿ ಹಲವು ವಿಷಯಗಳನ್ನು ಎತ್ತಿವೆ. ಆಪರೇಷನ್ ಸಿಂಧೂರದಂತಹ ವಿಷಯಗಳ ಕುರಿತು ಸರ್ಕಾರ ಮುಕ್ತ ಮನಸ್ಸಿನೊಂದಿಗೆ ಚರ್ಚೆಗೆ ಸಿದ್ದವಾಗಿದೆ’ ಎಂದು ತಿಳಿಸಿದರು.

ಸರ್ವಪಕ್ಷಗಳ ಸಭೆಯಲ್ಲಿ 51 ಪಕ್ಷಗಳ 54 ಪ್ರತಿನಿಧಿಗಳು ಭಾಗವಹಿಸಿದ್ದು, ಅವರಲ್ಲಿ 40 ಮಂದಿ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದರು.

‘ಗಲಭೆಪೀಡಿತ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ವಿಸ್ತರಿಸುವ ನಿರ್ಣಯದ ಜತೆ, ಸರ್ಕಾರವು ಎಂಟು ಹೊಸ ಮಸೂದೆಗಳನ್ನು ಮಂಡಿಸುವ ಉದ್ದೇಶವನ್ನು ಹೊಂದಿದೆ. ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಪದಚ್ಯುತಗೊಳಿಸುವ ನಿರ್ಣಯವನ್ನು ಮಂಡಿಸುವ ಯೋಚನೆಯೂ ಇದೆ’ ಎಂದರು.

ವಿರೋಧ ಪಕ್ಷಗಳ ನಾಯಕರಾದ ಕಾಂಗ್ರೆಸ್ನ ಗೌರವ್ ಗೊಗೊಯ್, ಸಮಾಜವಾದಿ ಪಕ್ಷದ ರಾಮಗೋಪಾಲ್ ಯಾದವ್, ಸಿಪಿಎಂನ ಜಾನ್ ಬ್ರಿಟ್ಟಾಸ್ ಮತ್ತು ಸಿಪಿಐನ ಪಿ.ಸಂತೋಷ್ ಕುಮಾರ್ ಅವರು ಪಹಲ್ಗಾಮ್ ಭಯೋತ್ಪಾದಕ ದಾಳಿ, ಟ್ರಂಪ್ ಹೇಳಿಕೆ ಹಾಗೂ ಎಸ್ಐಆರ್ ಕುರಿತು ಸಂಸತ್ತಿನಲ್ಲಿ ನಡೆಯುವ ಚರ್ಚೆಗಳಿಗೆ ಪ್ರಧಾನಿ ಮೋದಿ ಅವರು ಪ್ರತಿಕ್ರಿಯಿಸಬೇಕು ಎಂದು ಒತ್ತಾಯಿಸಿದ್ದಾರೆ.

‘ಪ್ರಧಾನಿ ಪ್ರತಿಕ್ರಿಯೆ: ಸಾಧ್ಯತೆ ಕಡಿಮೆ’

ವಿರೋಧ ಪಕ್ಷಗಳು ಎತ್ತಿರುವ ವಿಷಯಗಳ ಬಗ್ಗೆ ಪ್ರಧಾನಿ ಸಂಸತ್ತಿನಲ್ಲಿ ಪ್ರತಿಕ್ರಿಯಿಸುವ ಸಾಧ್ಯತೆ ಕಡಿಮೆ ಎಂದು ಮೂಲಗಳು ತಿಳಿಸಿವೆ. ಆದರೂ ಭಾರತ–ಪಾಕಿಸ್ತಾನ ಕದನ ವಿರಾಮದ ಕುರಿತು ಡೊನಾಲ್ಡ್ ಟ್ರಂಪ್ ನೀಡಿರುವ ಹೇಳಿಕೆಗಳ ಬಗ್ಗೆ ಚರ್ಚೆ ನಡೆದಾಗಲೆಲ್ಲಾ ಸರ್ಕಾರ ಸೂಕ್ತವಾಗಿ ಪ್ರತಿಕ್ರಿಯಿಸಲಿದೆ ಎಂದು ಕಿರಣ್ ರಿಜಿಜು ಪ್ರತಿಪಾದಿಸಿದ್ದಾರೆ.

ರಾಜಕೀಯ ಪಕ್ಷಗಳು ಭಿನ್ನ ಸಿದ್ಧಾಂತ ಹೊಂದಿರಬಹುದು. ಆದರೆ ಕಲಾಪ ಸುಗಮವಾಗಿ ನಡೆಯುವುದನ್ನು ಖಾತರಿಪಡಿಸುವುದು ಎಲ್ಲರ ಜವಾಬ್ದಾರಿ
–ಕಿರಣ್ ರಿಜಿಜು, ಸಂಸದೀಯ ವ್ಯವಹಾರಗಳ ಸಚಿವ

ಭಾರತ–ಪಾಕ್ ಸಂಘರ್ಷದಂತಹ ಪ್ರಮುಖ ವಿಷಯದ ಬಗ್ಗೆ ಸಂಸತ್ತಿನ ಮೂಲಕ ದೇಶದ ಜನರೊಂದಿಗೆ ಮಾತನಾಡುವುದು ಪ್ರಧಾನಿಯ ಕರ್ತವ್ಯ
–ಗೌರವ್ ಗೊಗೊಯ್, ಕಾಂಗ್ರೆಸ್ ಮುಖಂಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.