ಭಾರತೀಯ ದಂಡ ಸಂಹಿತೆ (ಐಪಿಸಿ), ಅಪರಾಧ ದಂಡ ಸಂಹಿತೆ 1973 ಮತ್ತು ಭಾರತೀಯ ಸಾಕ್ಷ್ಯ ಕಾಯ್ದೆ 1872ಕ್ಕೆ ಬದಲಾಗಿ ‘ಭಾರತೀಯ ನ್ಯಾಯಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ನ್ಯಾಯ ಅಧಿನಿಯಮ’ ತರಲು ಸರ್ಕಾರ ಉದ್ದೇಶಿಸಿದೆ. ಗೃಹ ಸಚಿವ ಅಮಿತ್ ಶಾ ಈ ಸಂಬಂಧ ಮಸೂದೆಗಳನ್ನು ಮುಂಗಾರು ಅಧಿವೇಶನದಲ್ಲಿ ಮಂಡಿಸಿದ್ದರು. ಬಳಿಕ ಮಸೂದೆಗಳನ್ನು ಪರಿಶೀಲಿಸಿ ವರದಿ ಸಲ್ಲಿಸುವಂತೆ ಸಂಸದೀಯ ಸಮಿತಿಗೆ ಒಪ್ಪಿಸಲಾಗಿತ್ತು.