ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಬಿಐ ನಿರ್ದೇಶಕರ ಅವಧಿ ವಿಸ್ತರಣೆಗೆ ಸಂಸತ್ ಒಪ್ಪಿಗೆ

Last Updated 14 ಡಿಸೆಂಬರ್ 2021, 11:13 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ತನಿಖಾ ದಳದ (ಸಿಬಿಐ) ನಿರ್ದೇಶಕರ ಅವಧಿಯನ್ನು ಎರಡು ವರ್ಷಗಳಿಂದ ಗರಿಷ್ಠ ಐದು ವರ್ಷಗಳವರೆಗೆ ವಿಸ್ತರಿಸುವ ಮಸೂದೆಯನ್ನು ಸಂಸತ್ತು ಮಂಗಳವಾರ ಅಂಗೀಕರಿಸಿದೆ.

12 ಸದಸ್ಯರ ಅಮಾನತು ಖಂಡಿಸಿ ಪ್ರತಿಪಕ್ಷಗಳು ನಡೆಸಿದ ಪ್ರತಿಭಟನೆಯ ನಡುವೆಯೇ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ರಾಜ್ಯಸಭೆಯಲ್ಲಿ ‘ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ (ತಿದ್ದುಪಡಿ) ಮಸೂದೆ 2021’ ಅನ್ನು ಮಂಡಿಸಿದರು.

ನಂತರ ಮಸೂದೆಯನ್ನು ಮೇಲ್ಮನೆಯಲ್ಲಿ (ರಾಜ್ಯಸಭೆ) ಧ್ವನಿಮತದ ಮೂಲಕ ಅಂಗೀಕರಿಸಲಾಯಿತು. ಡಿ.3ರಂದು ಈ ಮಸೂದೆಯು ಲೋಕಸಭೆಯಲ್ಲಿ ಅಂಗೀಕಾರವಾಗಿತ್ತು.

ಸಿಬಿಐ ನಿರ್ದೇಶಕರ ಅಧಿಕಾರ ಅವಧಿಯನ್ನು ವಿಸ್ತರಿಸಲು ದೆಹಲಿ ವಿಶೇಷ ಪೊಲೀಸ್ ವ್ಯವಸ್ಥೆ (ತಿದ್ದುಪಡಿ) ಸುಗ್ರೀವಾಜ್ಞೆ–2021 ಮತ್ತು ಇ.ಡಿ ನಿರ್ದೇಶಕರ ಅಧಿಕಾರ ಅವಧಿಯನ್ನು ಐದು ವರ್ಷಗಳಿಗೆ ವಿಸ್ತರಿಸಲು ಕೇಂದ್ರೀಯ ಜಾಗೃತ ಆಯೋಗ (ತಿದ್ದುಪಡಿ) ಸುಗ್ರೀವಾಜ್ಞೆ–2021ಗಳನ್ನು ಕೇಂದ್ರ ಸರ್ಕಾರವು ಈ ಹಿಂದೆ ಹೊರಡಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT