ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲಂಗಾಣದಲ್ಲಿ ಬುಡಕಟ್ಟು ವಿಶ್ವವಿದ್ಯಾಲಯ: ಸಂಸತ್‌ನಲ್ಲಿ ಮಸೂದೆ ಅಂಗೀಕಾರ

Published 13 ಡಿಸೆಂಬರ್ 2023, 13:48 IST
Last Updated 13 ಡಿಸೆಂಬರ್ 2023, 13:48 IST
ಅಕ್ಷರ ಗಾತ್ರ

ನವದೆಹಲಿ: ತೆಲಂಗಾಣದಲ್ಲಿ ಸಮ್ಮಕ್ಕ ಸಾರಕ್ಕ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯ ಆರಂಭಿಸಲು ಅವಕಾಶ ಕಲ್ಪಿಸುವ ಮಸೂದೆಯನ್ನು ಸಂಸತ್ತು ಬುಧವಾರ ಅಂಗೀಕರಿಸಿದೆ.

ಈ ಮಸೂದೆಗೆ ಲೋಕಸಭೆಯು ಕಳೆದ ವಾರ ಅಂಗೀಕಾರ ನೀಡಿತ್ತು. ಸಂಸತ್ತಿನಲ್ಲಿ ಭದ್ರತಾ ಲೋಪ ಆಗಿರುವ ಬಗ್ಗೆ ಗೃಹ ಸಚಿವ ಅಮಿತ್ ಶಾ ಅವರು ಉತ್ತರ ನೀಡಬೇಕು ಎಂದು ಒತ್ತಾಯಿಸಿ ವಿರೋಧ ಪಕ್ಷಗಳ ಸದಸ್ಯರು ಸಭಾತ್ಯಾಗ ನಡೆಸಿದ್ದ ಸಂದರ್ಭದಲ್ಲಿ, ರಾಜ್ಯಸಭೆಯು ಈ ಮಸೂದೆಗೆ ಬುಧವಾರ ಧ್ವನಿಮತದ ಮೂಲಕ ಅಂಗೀಕಾರ ನೀಡಿತು.

ಆಂಧ್ರಪ್ರದೇಶ ಮರುವಿಂಗಡಣೆ ಕಾಯ್ದೆ 2014ರ ಅನ್ವಯ, ತೆಲಂಗಾಣದಲ್ಲಿ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯವನ್ನು ಸ್ಥಾಪಿಸಲೇಬೇಕಿದೆ ಎಂದು ವಿಶ್ವವಿದ್ಯಾಲಯ ಕುರಿತ ಮಸೂದೆ ಮೇಲಿನ ಚರ್ಚೆಗೆ ಉತ್ತರಿಸುವ ಸಂದರ್ಭದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT