ನವದೆಹಲಿ: ಸಂಸತ್ ಭವನ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ದೆಹಲಿ ಹೈಕೋರ್ಟ್ ಇಂದು (ಬುಧವಾರ) ಜಾಮೀನು ನೀಡಿದೆ.

ನ್ಯಾಯಮೂರ್ತಿಗಳಾದ ಸುಬ್ರಮೋನಿಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್ ಶಂಕರ್ ಅವರಿದ್ದ ಪೀಠವು ಜಾಮೀನು ಮಂಜೂರು ಮಾಡಿದೆ.

ಆರೋಪಿಗಳಾದ ನೀಲಂ ಮತ್ತು ಮಹೇಶ್ ಕುಮಾವತ್ ಅವರಿಗೆ ತಲಾ ₹50,000 ವೈಯಕ್ತಿಕ ಬಾಂಡ್ ಮತ್ತು ಇಬ್ಬರು ಶ್ಯೂರಿಟಿ ಒದಗಿಸುವಂತೆ ನ್ಯಾಯಪೀಠ ಆದೇಶಿಸಿದೆ.
.ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ: ಇಂಡಿಯಾ ಬಣ – ಚುನಾವಣಾ ಆಯೋಗದ ಸಭೆ ಮುಂದಕ್ಕೆ.ಕನ್ವರ್ ಯಾತ್ರೆ | ಹೋಟೆಲ್ಗಳ ಪರವಾನಗಿ ಪ್ರದರ್ಶನ ಕಡ್ಡಾಯ: ಉತ್ತರಾಖಂಡ ಸರ್ಕಾರ.
ಘಟನೆಗೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಸಂದರ್ಶನ ನೀಡಬಾರದು. ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ಗಳನ್ನು ಹಂಚಿಕೊಳ್ಳಬಾರದು ಎಂದು ನ್ಯಾಯಾಧೀಶರು ತಾಕೀತು ಮಾಡಿದ್ದಾರೆ.

ಆರೋಪಿಗಳು ತಮ್ಮ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು.

2023ರ ಡಿಸೆಂಬರ್ 13ರಂದು ಸಂಸತ್ಗೆ ನುಗ್ಗಿದ್ದ ಇಬ್ಬರು ಆಗಂತುಕರು ಲೋಕಸಭೆ ಹಾಲ್ಗೆ ಜಿಗಿದು ಸ್ಮೋಕ್ ಕ್ಯಾನ್ಗಳನ್ನು ಹಾರಿಸಿದ್ದರು. ಘಟನೆ ಸಂಬಂಧ ಮನೋರಂಜನ್ ಡಿ, ಸಾಗರ್ ಶರ್ಮಾ, ಅಮೊಲ್ ಧನರಾಜ್ ಶಿಂದೆ, ನೀಲಮ್ ರನೋಲಿಯಾ, ಲಲಿತ್ ಝಾ ಹಾಗೂ ಮಹೇಶ್ ಕುಮಾವತ್ ಎಂಬವರನ್ನು ದೆಹಲಿ ಪೊಲೀಸರು ಬಂಧಿಸಿದ್ದರು.
.ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ .IPS ಅಧಿಕಾರಿ ವಿಕಾಸ್ ಕುಮಾರ್ ಅಮಾನತು ಆದೇಶ ಪ್ರಶ್ನಿಸಿ ಮೇಲ್ಮನವಿ: ನಾಳೆ ವಿಚಾರಣೆ.ಭಾರತ ಬ್ರಿಕ್ಸ್ಗೆ ಬದ್ಧ: 5 ರಾಷ್ಟ್ರಗಳ ಪ್ರವಾಸ ಆರಂಭಿಸಿದ ಮೋದಿ ಹೇಳಿಕೆ .ಸಚಿವ ಸಂಪುಟ ಸಭೆ: ನಂದಿಗಿರಿಧಾಮ, ಸ್ಕಂದಗಿರಿಗೆ ಪ್ರವೇಶ ನಿರ್ಬಂಧ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.