ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸತ್ ಭದ್ರತಾ ಲೋಪ | ಆರೋಪಿಗಳು ಬಳಕೆ ಮಾಡಿದ್ದ ಫೋನ್ ಸುಟ್ಟ ಸ್ಥಿತಿಯಲ್ಲಿ ಪತ್ತೆ

Published 17 ಡಿಸೆಂಬರ್ 2023, 4:40 IST
Last Updated 17 ಡಿಸೆಂಬರ್ 2023, 4:40 IST
ಅಕ್ಷರ ಗಾತ್ರ

ನವದೆಹಲಿ: ಸಂಸತ್ ಭದ್ರತಾ ಉಲ್ಲಂಘನೆ ಪ್ರಕರಣದಲ್ಲಿ ಆರೋಪಿಗಳು ಬಳಕೆ ಮಾಡಿದ್ದ ಫೋನ್, ರಾಜಸ್ಥಾನದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿವೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ.

ಈ ಕುರಿತು ಸುದ್ದಿ ಸಂಸ್ಥೆ 'ಎಎನ್‌ಐ', ಚಿತ್ರ ಸಮೇತ ಪೋಸ್ಟ್ ಮಾಡಿದೆ.

ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣದ ಪ್ರಮುಖ ಸಂಚುಕೋರ ಲಲಿತ್ ಝಾ, ಆರೋಪಿಗಳ ಫೋನ್ ಇರಿಸಿಕೊಂಡಿದ್ದರು ಎನ್ನಲಾಗಿದೆ. ಬಳಿಕ ಇದನ್ನು ನಾಶಪಡಿಸಿರಬಹುದು ಎಂದು ಅಂದಾಜಿಸಲಾಗಿದೆ.

ತನಿಖೆ ವೇಳೆಯಲ್ಲಿ ರಾಜಸ್ಥಾನದಲ್ಲಿ ಆರೋಪಿಗಳು ಬಳಕೆ ಮಾಡಿದ್ದ ಫೋನ್‌ಗಳ ಬಿಡಿಭಾಗಗಳು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿವೆ.

ಸಂಸತ್ ಮೇಲಿನ ದಾಳಿಯ 22ನೇ ವರ್ಷದ ಕಹಿ ನೆನಪಿನ ದಿನವೇ ಭಾರಿ ಭದ್ರತಾ ಲೋಪದ ಘಟನೆಗೆ ಲೋಕಸಭೆ ಸಾಕ್ಷಿಯಾಗಿತ್ತು. ಡಿಸೆಂಬರ್ 13ರಂದು ಕಲಾಪ ನಡೆಯುತ್ತಿರುವಾಗಲೇ ಇಬ್ಬರು ಯುವಕರು ಸಂದರ್ಶಕರ ಗ್ಯಾಲರಿಯಿಂದ ಸದನದೊಳಗೆ ಜಿಗಿದು ಘೋಷಣೆಗಳನ್ನು ಕೂಗುತ್ತಾ 'ಸ್ಮೋಕ್ ಕ್ಯಾನ್' (ಹಳದಿ ಬಣ್ಣದ ಹೊಗೆ) ಹಾರಿಸಿ ದಾಂಧಲೆ ಎಬ್ಬಿಸಿದ್ದರು. ಇದೇ ಸಮಯದಲ್ಲಿ ಸಂಸತ್‌ನ ಹೊರಗೆ ಪ್ರತಿಭಟನೆ ನಡೆಸುತ್ತಿದ್ದ ಇಬ್ಬರನ್ನು ಬಂಧಿಸಲಾಗಿತ್ತು.

ಘಟನೆ ಸಂಬಂಧ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ. ಪ್ರಕರಣ ಸಂಬಂಧ ಈವರೆಗೆ ಆರು ಮಂದಿಯನ್ನು ಬಂಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT