ನಿಯಮಗಳ ಪ್ರಕಾರವೇ ಕಲಾಪ: ರಿಜಿಜು
‘ಸಂಸತ್ತು ಸುಗಮವಾಗಿ ಕಾರ್ಯ ನಿರ್ವಹಿಸಲು ಅವಕಾಶ ನೀಡಬೇಕು ಎಂದು ಎಲ್ಲ ಪಕ್ಷಗಳ ಪ್ರತಿನಿಧಿಗಳನ್ನು ಕೋರಿದ್ದೇವೆ ಮತ್ತು ಕಲಾಪ ನಿಯಮಗಳ ಪ್ರಕಾರವೇ ನಡೆಯುತ್ತದೆ’ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸರ್ವ ಪಕ್ಷಗಳ ಸಭೆಯ ಬಳಿಕ ಸುದ್ದಿಗಾರರಿಗೆ ತಿಳಿಸಿದರು. ‘ಸಂಸದೀಯ ಪ್ರಜಾಪ್ರಭುತ್ವದಲ್ಲಿ ಬಿಕ್ಕಟ್ಟುಗಳು ಉಂಟಾಗುತ್ತಿರುತ್ತವೆ. ಪ್ರತಿಯೊಬ್ಬರೂ ತಮ್ಮದೇ ಆದ ಸಿದ್ಧಾಂತ ಮತ್ತು ಕಾರ್ಯಸೂಚಿ ಹೊಂದಿರುತ್ತಾರೆ. ಈ ವ್ಯತ್ಯಾಸಗಳ ನಡುವೆಯೂ ಸದನ ಸುಗಮವಾಗಿ ಸಾಗಬೇಕು. ಅದಕ್ಕೆ ಅಡ್ಡಿಪಡಿಸಬಾರದು ಎಂದು ಮನವಿ ಮಾಡಿದ್ದೇವೆ’ ಎಂದರು.