
ನಿಮ್ಮನ್ನು ಬೆದರಿಸುತ್ತಿಲ್ಲ. ಎಚ್ಚರಿಸುತ್ತಿದ್ದೇವೆ. ಕ್ಷೇತ್ರ ಪುನರ್‌ವಿಂಗಡಣೆಯಲ್ಲಿ ಅನ್ಯಾಯವಾದರೆ ನೀವು ಇದುವರೆಗೂ ನೋಡದ ತಮಿಳುನಾಡನ್ನು ನೋಡಲಿದ್ದೀರಿ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಕ್ಷೇತ್ರ ಪುನರ್‌ವಿಂಗಡಣೆಗೆ ಮಾಡುತ್ತಿರುವ ಅವಸರವು, ಪ್ರಜಾಪ್ರಭುತ್ವ ಹಾಗೂ ರಾಜ್ಯಗಳ ಹಕ್ಕುಗಳ ಮೇಲಿನ ನೇರ ಹಲ್ಲೆಯಾಗಿದೆ. ಡಿಎಂಕೆ ಮಾತ್ರವಲ್ಲ, ತಮಿಳುನಾಡಿನ ರಾಜಕೀಯ ಪಕ್ಷಗಳು ಹಾಗೂ ರಾಜ್ಯ ಸರ್ಕಾರವನ್ನು ಸಂಪರ್ಕಿಸದೆ, ಕೇಂದ್ರ ಸರ್ಕಾರವು ಏಕಪಕ್ಷೀಯವಾಗಿ ಈ ಪ್ರಕ್ರಿಯೆ ನಡೆಸುತ್ತಿದೆಎಂ.ಕೆ. ಸ್ಟಾಲಿನ್, ತಮಿಳುನಾಡು ಮುಖ್ಯಮಂತ್ರಿ
ಉತ್ತರದ ರಾಜ್ಯಗಳಲ್ಲಿ ಮಹಿಳೆಯರು, ಪರಿಶಿಷ್ಟರು, ಹಿಂದುಳಿದವರ ಕ್ಷೇತ್ರಗಳ ಸಂಖ್ಯೆ ಅನುಪಾತದ ಆಧಾರದಲ್ಲಿ ಹೆಚ್ಚಲಿದೆ. ಆದರೆ ದಕ್ಷಿಣದಲ್ಲಿ ಇವರ ಕ್ಷೇತ್ರಗಳ ಸಂಖ್ಯೆ ಕಡಿಮೆಯಾದರೆ ಅನ್ಯಾಯವಾಗಲಿದೆ. ತೆಲಂಗಾಣ ಸೇರಿ ದಕ್ಷಿಣ ರಾಜ್ಯಗಳಲ್ಲಿ ಹೋರಾಟ ನಡೆಸಲಾಗುವುದು. ಕೇರಳದಲ್ಲಿ ಲೋಕಸಭಾ ಕ್ಷೇತ್ರಗಳು 20ರಿಂದ 30ಕ್ಕೆ ಹೆಚ್ಚಳವಾಗಲಿವೆ. ಆದರೆ, ಉತ್ತರ ಪ್ರದೇಶದದಲ್ಲಿ 80ರಿಂದ 120ಕ್ಕೆ ಹೆಚ್ಚಳವಾಗಲಿವೆ. ರಾಜಕೀಯ ಪಕ್ಷಗಳು ಹಾಗೂ ರಾಜ್ಯ ಸರ್ಕಾರಗಳೊಂದಿಗೆ ವ್ಯಾಪಕ ಸಮಾಲೋಚನೆ ನಡೆಸುವ ಮೂಲಕ ಒಮ್ಮತ ಅಭಿಪ್ರಾಯ ರೂಪಿಸುವ ಪ್ರಕ್ರಿಯೆ ನಡೆಸಬೇಕುರೇವಂತ ರೆಡ್ಡಿ, ತೆಲಂಗಾಣ ಮುಖ್ಯಮಂತ್ರಿ
ಮಹಿಳೆಯರಿಗೆ ಶೇ33ರಷ್ಟು ಮೀಸಲಾತಿ ನೀಡುವುದು ಹಾಗೂ ಕ್ಷೇತ್ರಗಳ ಮರುವಿಂಗಡನೆಗಾಗಿ ಸಂವಿಧಾನಕ್ಕೆ ತಿದ್ದುಪಡಿ ತರಬೇಕು. ಇದಕ್ಕೆ ಸಂಬಂಧಿಸಿದ ಮಸೂದೆಗಳನ್ನು ಸರ್ಕಾರ ಈ ವರೆಗೂ ಕಾಂಗ್ರೆಸ್ ಜೊತೆ ಹಂಚಿಕೊಂಡಿಲ್ಲ. ಕೇಂದ್ರದ ಈ ನಡೆ ಪ್ರಜಾಪ್ರಭುತ್ವದ ಅಣಕಜೈರಾಮ್ ರಮೇಶ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ
ಅಧಿವೇಶನ ಆರಂಭವಾಗುವುದಕ್ಕೆ ಕೆಲವು ಗಂಟೆಗಳು ಮಾತ್ರ ಬಾಕಿ ಇದ್ದು, ಈ ವರೆಗೆ ಯಾರೂ ಪ್ರಸ್ತಾವಿತ ತಿದ್ದುಪಡಿ ಮಸೂದೆಗಳನ್ನು ನೋಡಿಲ್ಲ. ಇದು ಸರ್ವಾಧಿಕಾರಿ ಧೋರಣೆಯಲ್ಲದೇ ಇನ್ನೇನು? ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತನ್ನು ಅಣಕಿಸುತ್ತಿದ್ದಾರೆಡೆರೆಕ್ ಓಬ್ರಯಾನ್, ಟಿಎಂಸಿ ರಾಜ್ಯಸಭಾ ಸಂಸದ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.