ನವದೆಹಲಿ: ಐದು ದಿನಗಳ ಕಾಲ ಸಂಸತ್ತಿನ ವಿಶೇಷ ಅಧಿವೇಶನ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಗುರುವಾರ ತಿಳಿಸಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ ಸೆಪ್ಟೆಂಬರ್ 9–10ರಂದು ನಡೆಯಲಿರುವ ಜಿ20 ಶೃಂಗ ಸಭೆಯ ಬಳಿಕ ನಡೆಯುವ ವಿಶೇಷ ಅಧಿವೇಶನದ ಕಾರ್ಯಸೂಚಿ ಏನು ಎಂಬುದರ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ.
ಸಂಸತ್ತಿನ ವಿಶೇಷ ಅಧಿವೇಶನವನ್ನು ಸಪ್ಟೆಂಬರ್ 18 ರಿಂದ 22ರ ವರೆಗೆ ಕರೆಯಲಾಗಿದ್ದು ಒಟ್ಟು 5 ಅವಧಿಗಳು ಇರಲಿವೆ. 17ನೇ ಲೋಕಸಭೆಯ 13ನೇ ಅಧಿವೇಶನ ಹಾಗೂ ರಾಜ್ಯಸಭೆಯ 261ನೇ ಅಧಿವೇಶನ ಇದಾಗಿರಲಿದೆ. ಅಮೃತ್ ಕಾಲದ ಈ ಮಹತ್ವದ ಕಾಲಫಟ್ಟದಲ್ಲಿ ಒಂದು ರಚನಾತ್ಮಕ ಅಧಿವೇಶವನ್ನು ಎದುರು ನೋಡುತ್ತಿದ್ದೇವೆ ಎಂದು ಜೋಶಿ ಎಕ್ಸ್ (ಟ್ವಿಟರ್)ನಲ್ಲಿ ಹೇಳಿಕೊಂಡಿದ್ದಾರೆ.