ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೇಂದ್ರೀಯ ಸಶಸ್ತ್ರ ಪಡೆಗಳಲ್ಲಿ ಮಹಿಳೆಯರ ಸಂಖ್ಯೆ ಕಡಿಮೆ’

ಸಂಸದೀಯ ಸ್ಥಾಯಿ ಸಮಿತಿ ಕಳವಳ * ಅನುಕೂಲಕರ ವಾತಾವರಣ ನಿರ್ಮಾಣಕ್ಕೆ ಶಿಫಾರಸು
Last Updated 13 ಡಿಸೆಂಬರ್ 2022, 14:23 IST
ಅಕ್ಷರ ಗಾತ್ರ

ನವದೆಹಲಿ: ಸಿಆರ್‌ಪಿಎಫ್‌, ಬಿಎಸ್‌ಎಫ್‌ ಸೇರಿದಂತೆ ಕೇಂದ್ರೀಯ ಸಶಸ್ತ್ರ ಪೊಲೀಸ್‌ ಪಡೆಗಳಲ್ಲಿ (ಸಿಎಪಿಎಫ್‌) ಮಹಿಳೆಯರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕಡಿಮೆ ಇದೆ ಎಂದು ಗೃಹ ವ್ಯವಹಾರಗಳ ಕುರಿತ ಸಂಸದೀಯ ಸ್ಥಾಯಿ ಸಮಿತಿ ಕಳವಳ ವ್ಯಕ್ತಪಡಿಸಿದೆ.

ಗಡಿಗಳಲ್ಲಿರುವ ಸೇನಾ ಠಾಣೆಗಳಲ್ಲಿ ಮಹಿಳೆಯರು ಕೂಡ ಕರ್ತವ್ಯ ನಿರ್ವಹಿಸಲು ಅನುಕೂಲಕರವಾದ ವಾತಾವರಣ ನಿರ್ಮಿಸಬೇಕು. ಹೀಗೆ ಮಾಡುವುದರಿಂದ ಸಿಎಪಿಎಫ್‌ಗಳನ್ನು ಸೇರುವಂತೆ ಮಹಿಳೆಯರಿಗೆ ಉತ್ತೇಜನ ನೀಡಿದಂತಾಗುವುದು ಎಂದು ಬಿಜೆಪಿಯ ರಾಜ್ಯಸಭಾ ಸದಸ್ಯ ಬ್ರಿಜಲಾಲ್‌ ನೇತೃತ್ವದ ಸ್ಥಾಯಿ ಸಮಿತಿ ತನ್ನ ವರದಿಯಲ್ಲಿ ಹೇಳಿದೆ.

ರಾಜ್ಯಸಭೆಯಲ್ಲಿ ಮಂಗಳವಾರ ಈ ವರದಿಯನ್ನು ಮಂಡಿಸಲಾಯಿತು.

‘ಕೇಂದ್ರೀಯ ಸಶಸ್ತ್ರ ಪಡೆಗಳಲ್ಲಿ ಮಹಿಳೆಯರ ನೇಮಕಾತಿಯನ್ನು ಉತ್ತೇಜಿಸಲು ಗೃಹ ಸಚಿವಾಲಯ ಸಾಕಷ್ಟು ಶ್ರಮಿಸುತ್ತಿದೆ. ಆದಾಗ್ಯೂ, ಈ ಪಡೆಗಳಲ್ಲಿ ಮಹಿಳೆಯರ ಸಂಖ್ಯೆ ಗಣನೀಯವಾಗಿ ಕಡಿಮೆಯೇ ಇದೆ’ ಎಂದು ವರದಿಯಲ್ಲಿ ಹೇಳಲಾಗಿದೆ.

ಸಿಐಎಸ್‌ಎಫ್‌ ಹಾಗೂ ಸಿಆರ್‌ಪಿಎಫ್‌ಗಳಲ್ಲಿ ಮಹಿಳೆಯರ ನೇಮಕಕ್ಕೆ ಹಲವು ಹಂತಗಳಲ್ಲಿ ನೇಮಕಾತಿ ರ‍್ಯಾಲಿಗಳನ್ನು ಆಯೋಜಿಸಬೇಕು, ಈ ಪಡೆಗಳನ್ನು ಸೇರಲುಮಹಿಳೆಯರು ಹಿಂಜರಿಯುತ್ತಿರುವುದಕ್ಕೆ ಕಾರಣಗಳನ್ನು ಗೃಹ ಸಚಿವಾಲಯ ಗುರುತಿಸಿ, ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂಬುದು ಸೇರಿದಂತೆ ಹಲವಾರು ಶಿಫಾರಸುಗಳನ್ನು ಸಮಿತಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT