ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 4ರಿಂದ ಆರಂಭವಾಗಿ ಡಿಸೆಂಬರ್ 22ಕ್ಕೆ ಮುಕ್ತಾಯವಾಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ಈ ಕುರಿತು ಎಕ್ಸ್ ತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು ‘ಸಂಸತ್ತಿನ 2023 ರ ಚಳಿಗಾಲದ ಅಧಿವೇಶನವು ಡಿಸೆಂಬರ್ 4 ರಿಂದ ಪ್ರಾರಂಭವಾಗಿ ಡಿಸೆಂಬರ್ 22 ರವರೆಗೆ ಇರಲಿದೆ. 19 ದಿನಗಳಲ್ಲಿ 15 ಅಧಿವೇಶನಗಳು ನಡೆಯಲಿದೆ’ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.