ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಆಯುಷ್ಮಾನ್ ಭಾರತ’ವನ್ನು ಜಾರಿಗೊಳಿಸದ ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದ ಪಕ್ಷಗಳನ್ನು ಜನರು ತಿರಸ್ಕರಿಸಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.

ಅಲ್ಲದೆ, ಇದು ಪಶ್ಚಿಮ ಬಂಗಾಳದಲ್ಲಿಯೂ ಪುನರಾವರ್ತನೆಯಾಗಲಿದೆ ಎಂದು ತಿಳಿಸಿದರು.

ದೆಹಲಿ ಸರ್ಕಾರವು ಗುರುವಾರ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ ಆರೋಗ್ಯ ಮೂಲಸೌಕರ್ಯ ಮಿಷನ್ (ಪಿಎಂ–ಎಬಿಎಚ್ಐಎಂ) ಒಪ್ಪಂದಕ್ಕೆ ಸಹಿ ಮಾಡಿತು. ಈ ವೇಳೆ ಮಾತನಾಡಿದ ನಡ್ಡಾ ಅವರು, ಆಯುಷ್ಮಾನ್ ಭಾರತ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಿಂದ 62 ಕೋಟಿ ಜನರು ಲಾಭ ಪಡೆದಿದ್ದು, ಇದು ವಿಶ್ವದ ಅತಿದೊಡ್ಡ ಆರೋಗ್ಯ ಯೋಜನೆಯಾಗಿದೆ. ಇದೀಗ ದೆಹಲಿಯ 36 ಲಕ್ಷ ಜನರು ಈ ಯೋಜನೆಯ ಲಾಭ ಪಡೆಯಲಿದ್ದಾರೆ ಎಂಬುದು ಹೆಮ್ಮೆಯ ವಿಚಾರ ಎಂದು ಪ್ರತಿಪಾದಿಸಿದರು.

70 ವರ್ಷ ಮೀರಿದ ಪ್ರತಿಯೊಬ್ಬರೂ ಆಯುಷ್ಮಾನ್ ವಯ ವಂದನಾ ಯೋಜನೆ ವ್ಯಾಪ್ತಿಗೆ ಒಳಪಡಲಿದ್ದಾರೆ. ಈ ಯೋಜನೆಯಡಿ ಈಗಾಗಲೇ 8.19 ಕೋಟಿ ಮಂದಿ ಚಿಕಿತ್ಸೆ ಪಡೆದಿದ್ದು, ಸರ್ಕಾರವು ಇದಕ್ಕೆ ₹1.26 ಲಕ್ಷ ಕೋಟಿ ವೆಚ್ಚ ಮಾಡಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.