ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಗೆ ಸವಾಲಾಗುವ ಕ್ಷೇತ್ರದಿಂದ ರಾಹುಲ್‌ ಸ್ಪರ್ಧಿಸಲಿ: ಡಿ.ರಾಜಾ

Published 9 ಮಾರ್ಚ್ 2024, 13:42 IST
Last Updated 9 ಮಾರ್ಚ್ 2024, 13:42 IST
ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸವಾಲು ಎಸೆಯುವ ಕ್ಷೇತ್ರದಿಂದಲೇ ಸ್ಪರ್ಧಿಸಬೇಕು ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ.ರಾಜಾ ಶನಿವಾರ ಹೇಳಿದರು.

ರಾಹುಲ್ ಗಾಂಧಿ ಕೇರಳದ ವಯನಾಡಿನಿಂದ ಸ್ಪರ್ಧಿಸುವುದಾಗಿ ಪಕ್ಷವು ಘೋಷಿಸಿದ ಬೆನ್ನಲ್ಲೇ ಈ ಹೇಳಿಕೆ ನೀಡಿದರು.

ಡಿ.ರಾಜಾ ಅವರ ಪತ್ನಿ ಎಲ್‌ಡಿಎಫ್‌ ಮೈತ್ರಿ ಪರವಾಗಿ ವಯನಾಡ್‌ನಿಂದ ಸ್ಪರ್ಧಿಸುತ್ತಿದ್ದಾರೆ.

‘ಮೈತ್ರಿಕೂಟದ ಒಪ್ಪಂದದ ಅನುಸಾರ ಸಿಪಿಐ ನಾಲ್ಕು ಸೀಟುಗಳನ್ನು ಪಡೆದಿತ್ತು. ಅದರಲ್ಲಿ ವಯನಾಡ್‌ ಕೂಡ ಒಂದು. ಹೀಗಾಗಿ ಅಲ್ಲಿ ಅಭ್ಯರ್ಥಿಯನ್ನು ಘೋಷಿಸಿದ್ದೇವೆ. ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಆಯ್ಕೆ ಮಾಡುವುದು ಆಯಾ ಪಕ್ಷಗಳ ವಿಶೇಷಾಧಿಕಾರ. ಈ ವಿಷಯದಲ್ಲಿ ಇದು ಕಾಂಗ್ರೆಸ್‌ ಪಕ್ಷದ ವಿಶೇಷಾಧಿಕಾರ’ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ, ‘ರಾಹುಲ್‌ ಗಾಂಧಿ ರಾಜ್ಯ ನಾಯಕ ಅಲ್ಲ, ರಾಷ್ಟ್ರ ನಾಯಕ. ಬಿಜೆಪಿಗೆ ತೀವ್ರ ಸ್ಪರ್ಧೆಯೊಡ್ಡುವ ಯಾವುದಾದರೂ ಕ್ಷೇತ್ರದಲ್ಲಿ ಅವರು ಸ್ಪರ್ಧಿಸಬೇಕು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT