ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮಾನ ವಿಳಂಬ: ಮಾಹಿತಿ ನೀಡುತ್ತಿದ್ದ ಪೈಲಟ್ ಮೇಲೆ ಪ್ರಯಾಣಿಕ ಹಲ್ಲೆ

Published 15 ಜನವರಿ 2024, 5:01 IST
Last Updated 15 ಜನವರಿ 2024, 5:01 IST
ಅಕ್ಷರ ಗಾತ್ರ

ನವದೆಹಲಿ: ವಿಮಾನ ಟೇಕಾಫ್‌ ವಿಳಂಬದ ಬಗ್ಗೆ ಮಾಹಿತಿ ನೀಡುತ್ತಿದ್ದ ಇಂಡಿಗೋ ವಿಮಾನದ ಪೈಲಟ್‌ ಮೇಲೆ ಪ್ರಯಾಣಿಕನೊಬ್ಬ ಹಲ್ಲೆ ನಡೆಸಿದ ಘಟನೆ ಇಲ್ಲಿನ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಭಾನುವಾರ ಸಂಜೆ ಈ ಘಟನೆ ನಡೆದಿದ್ದು, ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಈ ಬಗ್ಗೆ ದೂರು ಬಂದಿದ್ದು, ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಡಿ.ಸಿ.ಪಿ ತಿಳಿಸಿದ್ದಾರೆ.

ಪೈಲಟ್ ಮೇಲೆ ಹಲ್ಲೆ ಮಾಡಿದ ಬಳಿಕ ಇತರ ವಿಮಾನ ಸಿಬ್ಬಂದಿಗಳು ಹಾಗೂ ಪ್ರಯಾಣಿಕರು ಕಿರುಚುವ ಶಬ್ದ ವಿಡಿಯೊದಲ್ಲಿ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT