ನವದೆಹಲಿ: ತಮ್ಮ ವಿರುದ್ಧ ಹೊರಡಿಸಿರುವ ಜಾಮೀನು ರಹಿತ ಬಂಧನ ವಾರಂಟ್ ಅನ್ನು ಹಿಂಪಡೆಯುವಂತೆ ಯೋಗ ಗುರು ಬಾಬಾ ರಾಮದೇವ್ ಹಾಗೂ ಪತಂಜಲಿ ಆಯುರ್ವೇದ ಕಂಪನಿಯ ಎಂಡಿ ಆಚಾರ್ಯ ಬಾಲಕೃಷ್ಣ ಅವರು ಕೇರಳ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ತಪ್ಪು ದಾರಿಗೆ ಎಳೆಯುವ ಜಾಹೀರಾತು ನೀಡಿದ್ದಕ್ಕಾಗಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಕಾರಣ ಬಾಬಾ ರಾಮದೇವ್ ಹಾಗೂ ಆಚಾರ್ಯ ಬಾಲಕೃಷ್ಣ ವಿರುದ್ಧ ಕೇರಳ ನ್ಯಾಯಾಲಯವು ಈಚೆಗೆ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು.

ಇಂಗ್ಲಿಷ್ ಮತ್ತು ಮಲಯಾಳಂ ಪತ್ರಿಕೆಗಳಲ್ಲಿ ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಪ್ರಕಟಿಸಿದ ಆರೋಪದ ಮೇಲೆ ದಿವ್ಯಾ ಫಾರ್ಮಸಿ ವಿರುದ್ಧ ಕೇರಳದ ಡ್ರಗ್ಸ್ ಇನ್ಸ್ಪೆಕ್ಟರ್ ಅವರು ಪ್ರಕರಣ ದಾಖಲಿಸಿದ್ದರು.

ಫೆಬ್ರುವರಿ 1ರಂದು ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಆರೋಪಿಗಳಿಗೆ ಸೂಚಿಸಿತ್ತು. ಆದರೆ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಲಾಗಿತ್ತು.

ಪತಂಜಲಿ ಆಯುರ್ವೇದ್ ಕಂಪನಿಯು ತಾನು ತಯಾರಿಸುವ ಔಷಧಗಳು ಹಲವು ಕಾಯಿಲೆಗಳನ್ನು ವಾಸಿ ಮಾಡುತ್ತವೆ ಎಂದು ಜಾಹೀರಾತಿನಲ್ಲಿ ಹೇಳಲಾಗಿತ್ತು.Misleading Ads Case: ಬಾಬಾ ರಾಮ್ದೇವ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್
.Misleading Ads Case: ಬಾಬಾ ರಾಮ್ದೇವ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್.ತಪ್ಪುದಾರಿಗೆ ಎಳೆಯುವ ಜಾಹೀರಾತು ಪ್ರಕರಣ: ಬಹಿರಂಗವಾಗಿ ಕ್ಷಮೆ ಯಾಚಿಸಲಿರುವ ರಾಮದೇವ.ರಾಮದೇವ ಕ್ಷಮಾಪಣೆಯಲ್ಲಿ ಸುಧಾರಣೆ: ಸುಪ್ರೀಂ ಕೋರ್ಟ್.ಬಾಬಾ ರಾಮದೇವ ಕಂಪನಿಯ ಪರವಾನಗಿ ಅಮಾನತಾದ ಔಷಧಿಗಳ ಪಟ್ಟಿ ಇಂತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.