ಪಟ್ನಾ: ಪಟ್ನಾದ ಜಯಪ್ರಕಾಶ್ ನಾರಾಯಣ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ನಿರ್ಮಾಣ ಮಾಡಿರುವ ₹1,200 ಕೋಟಿ ವೆಚ್ಚದ ಟರ್ಮಿನಲ್ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಉದ್ಘಾಟಿಸಿದ್ದಾರೆ.

ಇದೇ ವೇಳೆ ಪಟ್ನಾ ನಗರದ ಹೊರವಲಯದಲ್ಲಿರುವ ಬಿಹ್ತಾ ವಿಮಾನ ನಿಲ್ದಾಣದಲ್ಲಿ ₹1,410 ಕೋಟಿ ವೆಚ್ಚದಲ್ಲಿ ನಾಗರಿಕ ಸಂಕೀರ್ಣ ನಿರ್ಮಾಣ ಮಾಡಲು ಮೋದಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಪಟ್ನಾ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್, ಉಪಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಸೇರಿದಂತೆ ಇತರ ನಾಯಕರ ಸಮ್ಮುಖದಲ್ಲಿ ಮೋದಿ ಅವರು ಹಲವು ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.

ಬಿಜೆಪಿಯ ರಾಜ್ಯ ಘಟಕದ ಕಚೇರಿಗೂ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಕೊನೆಯದಾಗಿ ಅವರು 2024ರ ಲೋಕಸಭಾ ಚುನಾವಣೆ ವೇಳೆ ಇಲ್ಲಿಗೆ ಆಗಮಿಸಿದ್ದರು.

ಪಾಕಿಸ್ತಾನ ವಿರುದ್ಧದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಬಳಿಕ ಪ್ರಧಾನಿ ಮೋದಿ ಅವರ ಮೊದಲ ಬಿಹಾರ ಭೇಟಿ ಇದಾಗಿದೆ. ಶುಕ್ರವಾರದಂದು ರೋಹತಾಸ್ನಲ್ಲಿ ಪ್ರಧಾನಿ ಮೋದಿ ₹48,520 ಕೋಟಿ ವೆಚ್ಚದ ಅಭಿವದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಬಿಹಾರದಲ್ಲಿ ಈ ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.