ಪಟ್ನಾ: ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಬಿಹಾರದ ಸಮಸ್ತಿಪುರ ಜಿಲ್ಲೆಯ 17 ವರ್ಷದ ಬಾಲಕಿಯ ಮೃತದೇಹವು ಇಲ್ಲಿನ ವಸತಿ ನಿಲಯವೊಂದರ ಕೊಠಡಿಯಲ್ಲಿ ಸೋಮವಾರ(ಮೇ 2) ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚೆಗಷ್ಟೆ ಮಧ್ಯಂತರ ಪರೀಕ್ಷೆಯನ್ನು ಪೂರ್ಣಗೊಳಿಸಿ ಮನೆಗೆ ತೆರಳಿದ ಬಾಲಕಿಯು 10 ದಿನಗಳ ಬಳಿಕ ವಸತಿ ನಿಲಯಕ್ಕೆ ಆಗಮಿಸಿದ್ದಳು.

ವಸತಿ ನಿಲಯದ ಕೊಠಡಿಯಲ್ಲಿ ಬಾಲಕಿಯ ಮೃತದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಘಟನಾ ಸ್ಥಳಕ್ಕೆ ವೈದ್ಯಕೀಯ ಪ್ರಯೋಗಾಲಯ ಮತ್ತು ಮರಣೋತ್ತರ ಪರೀಕ್ಷಾ ಸಿಬ್ಬಂದಿಗಳು ಆಗಮಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ಅಭಿನವ್ ಕುಮಾರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.