ಬುಧವಾರ, 4 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಡಿಶಾ: ಉನ್ನತ ಶಿಕ್ಷಣ ಸಚಿವರನ್ನು ಸಂಪುಟದಿಂದ ಕೈಬಿಟ್ಟ ಸಿಎಂ ಪಟ್ನಾಯಕ್

Published 9 ಜೂನ್ 2023, 9:29 IST
Last Updated 9 ಜೂನ್ 2023, 9:29 IST
ಅಕ್ಷರ ಗಾತ್ರ

ಭುವನೇಶ್ವರ: ಒಡಿಶಾ ಉನ್ನತ ಶಿಕ್ಷಣ ಸಚಿವ ರೋಹಿತ್ ಪೂಜಾರಿ ಅವರನ್ನು ಸಂಪುಟದಿಂದ ಕೈಬಿಡಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಅತನು ನಾಯಕ್‌ ಅವರಿಗೆ ಉನ್ನತ ಶಿಕ್ಷಣ ಖಾತೆಯನ್ನು ಹೆಚ್ಚುವರಿಯಾಗಿ ವಹಿಸಲಾಗಿದೆ. 

ಕಳೆದ ವರ್ಷ ಜೂನ್‌ ತಿಂಗಳಲ್ಲಿ ಪೂಜಾರಿ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲಾಗಿತ್ತು. ಕಳೆದ ತಿಂಗಳು ಸಚಿವರ ಕಾರ್ಯಕ್ಷಮತೆಯನ್ನು ಸಿಎಂ ನವೀನ್‌ ಪಟ್ನಾಯಕ್‌ ಪರಿಶೀಲಿಸಿದ್ದರು.  

ಪೂಜಾರಿ ಅವರು ಉತ್ತಮ ನಿರ್ವಹಣೆ ತೋರುವಲ್ಲಿ ವಿಫಲರಾಗಿದ್ದರಿಂದ ಅವರನ್ನು ಕೈಬಿಡಲಾಗಿದೆ ಎಂದು ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT