ಭುವನೇಶ್ವರ: ಒಡಿಸ್ಸಿ ಸಂಗೀತಕ್ಕೆ ಶಾಸ್ತ್ರೀಯ ಸಂಗೀತ ಸ್ಥಾನಮಾನ ನೀಡಬೇಕು ಎಂದು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಒಡಿಸ್ಸಿ ಸಂಗೀತ ಸುಮಾರು 2000 ವರ್ಷಗಳ ಇತಿಹಾಸ ಹೊಂದಿದೆ. ತನ್ನದೇ ಆದ ರಾಗ ಹೊಂದಿದ್ದು, ಶಾಸ್ತ್ರ ಆಧಾರಿತವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಈ ಕುರಿತು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರಿಗೆ ಪತ್ರ ಬರೆದಿದ್ದು, ತನ್ನದೇ ಆದ ವ್ಯಾಕರಣ, ರೀತಿ, ತಾಳ ಹೊಂದಿರುವ ಒಡಿಸ್ಸಿ ಸಂಗೀತ ಹಿಂದೂಸ್ತಾನಿ ಮತ್ತು ಕರ್ನಾಟಕ ಸಂಗೀತಕ್ಕಿಂತಲೂ ಭಿನ್ನವಾಗಿದೆ ಎಂದು ಉಲ್ಲೇಖಿಸಿದ್ದಾರೆ.

ಶಾಸ್ತ್ರೀಯ ಸಂಗೀತ ಸ್ಥಾನಮಾನ ಪಡೆಯಲು ಬೇಕಾದ ಎಲ್ಲ ಅರ್ಹತೆಗಳನ್ನು ಒಡಿಸ್ಸಿ ಸಂಗೀತ ಹೊಂದಿದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಇದಕ್ಕೆ ಸ್ಥಾನಮಾನ ದೊರಕಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅನೇಕ ಕ್ರಮವಹಿಸಿದೆ. ಉತ್ತೇಜನ ನೀಡುವ ನಿಟ್ಟಿನಲ್ಲಿ ಈ ಹಿಂದೆಯೇ ಉತ್ಕಲ್ ಸಾಂಸ್ಕೃತಿಕ ವಿಶ್ವವಿದ್ಯಾಲಯವನ್ನೂ ಸ್ಥಾಪಿಸಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.