ಅಮರಾವತಿ: ಬಾಂಗ್ಲಾದೇಶದಲ್ಲಿ ಉಂಟಾಗಿರುವ ಅರಾಜಕತೆಯಿಂದಾಗಿ ಅಲ್ಪಸಂಖ್ಯಾತರು ಸಂಕಷ್ಟಕ್ಕೆ ಸಿಲುಕಿದ್ದಾರೆ, ಅವರನ್ನು ರಕ್ಷಿಸಿ ಎಂದು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಮಿತಿಗೆ ಮನವಿ ಮಾಡಿದ್ದಾರೆ.
ಬಾಂಗ್ಲಾದೇಶದಲ್ಲಿರುವ ಹಿಂದೂ, ಕ್ರೈಸ್ತ, ಬೌದ್ಧರು ಸೇರಿ ಅಲ್ಪಸಂಖ್ಯಾತರ ರಕ್ಷಣೆಗೆ ಪವನ್ ಕಲ್ಯಾಣ್ ಒತ್ತಾಯಿಸಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
‘ಬಾಂಗ್ಲಾದೇಶದಲ್ಲಿ ಶಾಂತಿ ಮರುಸ್ಥಾಪನೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಿ’ ಎಂದು ಭಾರತದಲ್ಲಿರುವ ಬಾಂಗ್ಲಾದೇಶದ ಹೈ ಕಮಿಷನ್, ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಮಿತಿಯನ್ನು ಎಕ್ಸ್‌ನಲ್ಲಿ ಟ್ಯಾಗ್ ಮಾಡಿದ್ದಾರೆ.
ನೆರೆಯ ದೇಶದ ಎಲ್ಲಾ ಅಲ್ಪಸಂಖ್ಯಾತರ ಸುರಕ್ಷತೆ, ಭದ್ರತೆ ಮತ್ತು ಸ್ಥಿರತೆಗಾಗಿ ಪ್ರಾರ್ಥಿಸುತ್ತೇನೆ ಎಂದ ಅವರು, ಹಿಂದೂ ದೇವಾಲಯಗಳನ್ನು ಧ್ವಂಸಗೊಳಿಸಿರುವುದು ಮತ್ತು ಬಾಂಗ್ಲಾದೇಶದಲ್ಲಿ ಸ್ಥಿತಿಗತಿಯ ಪೋಟೊಗಳನ್ನು ನೋಡಿ ಆಘಾತಗೊಂಡಿರುವುದಾಗಿ ಹೇಳಿದ್ದಾರೆ.