ಶಿವಸಾಗರ್ (ಪಿಟಿಐ): ಧೈರ್ಯವಿದ್ದರೆ ಬಂಧಿಸಿ ಎಂದು ಪೊಲೀಸರಿಗೆ ಸವಾಲು ಹಾಕಿದ್ದ ಕಾಂಗ್ರೆಸ್ ನಾಯಕ ಪವನ್ ಖೇರಾ ಹೈದರಾಬಾದ್ಗೆ ಓಡಿಹೋಗಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ ಲೇವಡಿ ಮಾಡಿದ್ದಾರೆ.

ಹಿಮಂತ ಮತ್ತು ಅವರ ಕುಟುಂಬದ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ಸಾಂ ಪೊಲೀಸರ ತಂಡವೊಂದು ಮಂಗಳವಾರ ಬೆಳಿಗ್ಗೆ ಪವನ್ ಖೇರಾ ಅವರ ದೆಹಲಿ ನಿವಾಸಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿತ್ತು.

ಶಿವಸಾಗರ್ನಲ್ಲಿ ಪಿಟಿಐ ಜೊತೆ ಮಾತನಾಡಿದ ಹಿಮಂತ, ‘ಪವನ್ ಅವರು ನಿನ್ನೆಯೇ ಓಡಿ ಹೋಗಿದ್ದರೂ, ಪೊಲೀಸರು ಅವರ ಮನೆಗೆ ಯಾಕೆ ಹೋದರು ಎಂದು ನನಗೆ ಗೊತ್ತಿಲ್ಲ. ನಿನ್ನೆಯವರೆಗೂ ನನ್ನನ್ನು ಬಂಧಿಸಿ ಎಂದು ಅವರು ಹೇಳುತ್ತಿದ್ದರು’ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಹಿಮಂತ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಹಲವು ಪಾಸ್ಪೋರ್ಟ್ಗಳನ್ನು ಮತ್ತು ವಿದೇಶಿ ಆಸ್ತಿಗಳನ್ನು ಹೊಂದಿದ್ದಾರೆ, ಆದರೆ ಮುಖ್ಯಮಂತ್ರಿ ಇದನ್ನು ಚುನಾವಣಾ ಅಫಿಡವಿಟ್ನಲ್ಲಿ ಉಲ್ಲೇಖಿಸಿಲ್ಲ ಎಂದು ಪವನ್ ಭಾನುವಾರ ಆರೋಪಿಸಿದ್ದರು. ಈ ಆರೋಪವನ್ನು ಹಿಮಂತ ಅವರು ಸುಳ್ಳು ಎಂದು ಪ್ರತಿಪಾದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-4-141676874

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.