ನಾಗ್ಪುರ: ಸ್ವಾತಂತ್ರ್ಯ ದಿನಾಚರಣೆಯಂದು ಮಾಡಿದ ತಮ್ಮ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ‘ಒಂದು ದೇಶ, ಒಂದು ಚುನಾವಣೆ’ ವ್ಯವಸ್ಥೆ ಜಾರಿಯಾಗಬೇಕು ಎಂದು ಹೇಳಿದ್ದರು. ಆದರೆ, ಜಮ್ಮು ಮತ್ತು ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ ಜೊತೆಯಲ್ಲಿಯೇ ಮಹಾರಾಷ್ಟ್ರದ ಚುನಾವಣೆಯನ್ನು ಏಕೆ ನಡೆಸುತ್ತಿಲ್ಲ’ ಎಂದು ಎನ್‌ಸಿಪಿ (ಶರದ್ ಬಣ) ಮುಖ್ಯಸ್ಥ ಶರದ್ ಪವಾರ್ ಶನಿವಾರ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.