ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ ಸ್ಪೀಕರ್ ಶಂಸೀರ್ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ: ಸಿಪಿಐ (ಎಂ)

Published 2 ಆಗಸ್ಟ್ 2023, 11:02 IST
Last Updated 2 ಆಗಸ್ಟ್ 2023, 11:02 IST
ಅಕ್ಷರ ಗಾತ್ರ

ತಿರುವನಂತಪುರಂ: ಹಿಂದೂ ದೇವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪ ಹೊತ್ತಿರುವ ಕೇರಳ ರಾಜ್ಯದ ಸ್ಪೀಕರ್ ಎ.ಎನ್. ಶಂಸೀರ್ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಕೇರಳದ ಆಡಳಿತಾರೂಢ ಸಿಪಿಐ(ಎಂ) ಪಕ್ಷ ಬುಧವಾರ ಸ್ಪಷ್ಟಪಡಿಸಿದೆ.

ಇತ್ತೀಚೆಗೆ ಎರ್ನಾಕುಲಂ ಶಾಲಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ್ದ ಶಂಸೀರ್ ಅವರು, ‘ಕೇಂದ್ರ ಸರ್ಕಾರ ಮಕ್ಕಳಿಗೆ ವಿಜ್ಞಾನ ಮತ್ತು ತಂತ್ರಜ್ಞಾನದ ಬದಲಿಗೆ ಹಿಂದೂ ಪುರಾಣ ಕಲಿಸಲು ಪ್ರಯತ್ನ ಮಾಡುತ್ತಿದೆ. ಗಣೇಶ ದೇವರ ಕುರಿತು ಪುರಾಣಗಳಲ್ಲಿ ಉಲ್ಲೇಖವಿದೆ. ಆದರೆ ಅದಕ್ಕೆ ಯಾವುದೇ ವೈಜ್ಞಾನಿಕ ಕಾರಣಗಳಿಲ್ಲ ಎಂದಿದ್ದರು.

ಸ್ಪೀಕರ್‌ ಹೇಳಿಕೆಯನ್ನು ವಿರೋಧಿಸಿ ಕೇರಳದಲ್ಲಿ ಬಿಜೆಪಿ, ವಿಎಚ್‌ಪಿ ಪ್ರತಿಭಟನೆ ನಡೆಸಿದ್ದವು. ಶಂಸೀರ್‌ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದವು.

ಪುರಾಣ ಮತ್ತು ನಂಬಿಕೆಗಳನ್ನು ತಪ್ಪಾಗಿ ಅರ್ಥೈಸುವುದು ಮತ್ತು ಅವುಗಳನ್ನೇ ವೈಜ್ಞಾನಿಕ ಚಿಂತನೆಗಳೆಂದು ಚಿತ್ರಿಸುವುದು ಸಮಾಜದ ಪ್ರಗತಿಯ ಹಿನ್ನಡೆಗೆ ಕಾರಣವಾಗುತ್ತದೆ ಎಂದು ಸಿಪಿಪಿ (ಎಂ) ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT