ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು–ಕಾಶ್ಮೀರ: ಬೃಹತ್‌ ಶೋಧ ಕಾರ್ಯಾಚರಣೆ

Published 21 ಮೇ 2023, 15:49 IST
Last Updated 21 ಮೇ 2023, 15:49 IST
ಅಕ್ಷರ ಗಾತ್ರ

ಪೂಂಛ್‌/ ಜಮ್ಮು (ಪಿಟಿಐ): ಜಮ್ಮು–ಕಾಶ್ಮೀರದ ಗಡಿ ಜಿಲ್ಲೆ ಪೂಂಛ್‌ನಲ್ಲಿ ಅನುಮಾನಾಸ್ಪದ ಚಲನವಲನಗಳು ಕಂಡುಬಂದ ಕಾರಣ ಭಾನುವಾರ ಸೇನಾಪಡೆ ಬೃಹತ್ ಶೋಧ ಕಾರ್ಯಾಚರಣೆ ನಡೆಸಿತು ಎಂದು ಅಧಿಕಾರಿಗಳು ತಿಳಿಸಿದರು.

ಮೆಂಧರ್‌ ಸೆಕ್ಟರ್‌ನಲ್ಲಿ ಗಸ್ತು ತಿರುಗುತ್ತಿದ್ದ ಸೈನಿಕರು ನಡೆಸಿದ ಗುಂಡಿನ ದಾಳಿಯಲ್ಲಿ ಯಾರಿಗೂ ಹಾನಿಯಾಗಿಲ್ಲ. ಕಾರ್ಯಾಚರಣೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಲ್ಲಿನ ನಿವಾಸಿಗಳಿಗೆ ಮನೆಯ ಒಳಗೇ ಇರಲು ಸೂಚಿಸಲಾಗಿತ್ತು. ಜನರಿರುವ ಪ್ರದೇಶದಲ್ಲಿ ಕಾರ್ಯಾಚರಣೆ ಮುಕ್ತಾಯವಾಗಿದ್ದು, ಯಾರನ್ನೂ ಬಂಧಿಸಿಲ್ಲ ಎಂದು ತಿಳಿಸಿದರು. ಅರಣ್ಯದಲ್ಲಿ ಶೋಧ ಕಾರ್ಯ ಮುಂದುವರಿದಿದೆ. ಆದರೆ ಶಂಕಿತ ಉಗ್ರರ ಸುಳಿವು ಲಭ್ಯವಾಗಿಲ್ಲ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT