ಇಡುಕ್ಕಿ: ಕೇರಳದಲ್ಲಿ ಶುಕ್ರವಾರ ಸುರಿದ ಭಾರಿ ಪ್ರಮಾಣದ ಮಳೆ ಅನಾಹುತ ಸೃಷ್ಟಿಸಿದೆ. ಇಡುಕ್ಕಿ ಜಿಲ್ಲೆಯ ಪೆಟ್ಟಿಮುಡಿ ಎಂಬಲ್ಲಿ ಭೂಕುಸಿತ ಉಂಟಾಗಿದ್ದು, ಕನಿಷ್ಠ 17 ಮಂದಿ ಮೃತಪಟ್ಟಿದ್ದಾರೆ. 52 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಮೃತರ ಪೈಕಿ ಇಬ್ಬರು ಮಕ್ಕಳು ಹಾಗೂ ಐವರು ಮಹಿಳೆಯರು ಇದ್ದಾರೆ. ಬಹುತೇಕರು ಪಕ್ಕದ ತಮಿಳುನಾಡಿನವರು. ಇವರು ಇಲ್ಲಿನ ಚಹಾ ತೋಟದ ಕಾರ್ಮಿಕರು.

ಕಾರ್ಮಿಕರು ವಾಸವಿದ್ದ 20ಕ್ಕೂ ಹೆಚ್ಚು ಸಾಲು ಮನೆಗಳ ಮೇಲೆ ಶುಕ್ರವಾರ ನಸುಕಿನಲ್ಲಿ ಮಣ್ಣು ಕುಸಿದಿದೆ. ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆದರೆ ಭಾರಿ ಮಳೆಯು ಶೋಧ ಕಾರ್ಯಕ್ಕೆ ಅಡ್ಡಿಯಾಗಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯನ್ನು (ಎನ್ಡಿಆರ್ಎಫ್) ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ. ನೆರವಿಗೆ ಹೆಲಿಕಾಪ್ಟರ್ ವ್ಯವಸ್ಥೆ ಮಾಡುವಂತೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಮಾಡಿದ್ದ ಮನವಿಗೆ ವಾಯುಪಡೆ ಸ್ಪಂದಿಸಿದ್ದು, ಹಾರಾಟಕ್ಕೆ ವಾತಾವರಣ ತಿಳಿಯಾಗುವುದನ್ನೇ ನಿರೀಕ್ಷಿಸಲಾಗುತ್ತಿದೆ.

ಇಡುಕ್ಕಿಯಲ್ಲಿ ರೆಡ್ ಅಲರ್ಟ್ ಘೋಷಿಸಿದ್ದ ಹವಾಮಾನ ಇಲಾಖೆ, ಶುಕ್ರವಾರ 20 ಸೆಂ.ಮೀ. ಮಳೆಯಾಗಲಿದೆ ಎಂದು ಎಚ್ಚರಿಸಿತ್ತು. ಇಡುಕ್ಕಿ, ವಯನಾಡ್, ಕೊಟ್ಟಾಯಂ ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ಮಳೆ ಎಚ್ಚರಿಕೆ ನೀಡಲಾಗಿದೆ.

* ಮೃತದೇಹಗಳನ್ನು ಹೊರತೆಗೆಯಲಾಗಿದೆ. 12 ಜನರನ್ನು ರಕ್ಷಿಸಲಾಗಿದ್ದು, ಗಾಯಾಳುಗಳನ್ನು ಟಾಟಾ ಆಸ್ಪತ್ರೆಗೆ ದಾಖಲಿಸಲಾಗಿದೆ.

- ಎಚ್. ದಿನೇಶ್, ಇಡುಕ್ಕಿ ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.