ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜ್ಯಕ್ಕೆ ಮಾಡಿರುವ ದ್ರೋಹವನ್ನು ಜನರು ಎಂದಿಗೂ ಕ್ಷಮಿಸಲ್ಲ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಹೇಳಿದ್ದಾರೆ.

ನಿತೀಶ್ ಕುಮಾರ್ ಅವರು, ಮಹಾಘಟಬಂಧನ್ ಮೈತ್ರಿಕೂಟ ತೊರೆದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಶೀಘ್ರದಲ್ಲೇ ಬಿಹಾರ ಪ್ರವೇಶಿಸಲಿರುವ ರಾಹುಲ್ ಗಾಂಧಿಯವರ ಭಾರತ್ ಜೋಡೊ ನ್ಯಾಯ ಯಾತ್ರೆಯ ಬಗ್ಗೆ ಪ್ರಧಾನಿ ಮತ್ತು ಬಿಜೆಪಿಗೆ ಭಯವಿದೆ. ಹೀಗಾಗಿ ನಿತೀಶ್ ಜೊತೆ ಸೇರಿಕೊಂಡು ನಾಟಕವಾಡುತ್ತಿದ್ದಾರೆ ಎಂಬುದು ಇದರಿಂದ ಗೊತ್ತಾಗುತ್ತಿದೆ ಎಂದು ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.

ಆಗಾಗ್ಗೆ ರಾಜಕೀಯ ಮೈತ್ರಿಯನ್ನು ಬದಲಾಯಿಸುವ ನಿತೀಶ್ ಕುಮಾರ್, ಬಣ್ಣ ಬದಲಾಯಿಸುವಲ್ಲಿ ಊಸರವಳ್ಳಿಯನ್ನೂ ಮೀರಿಸುತ್ತಾರೆ" ಎಂದು ರಮೇಶ್ ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ.

ನಿತೀಶ್ ಕುಮಾರ್ ಅವರು ಭಾನುವಾರ ಬೆಳಗ್ಗೆ ರಾಜ್ಯಪಾಲ ರಾಜೇಂದ್ರ ವಿ. ಅರ್ಲೇಕರ್ ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದರು. ಮೂಲಗಳ ಪ್ರಕಾರ ಇಂದು ಸಂಜೆ ಅಥವಾ ರಾತ್ರಿ ಬಿಜೆಪಿ ಬೆಂಬಲದೊಂದಿಗೆ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುವ ಸಾಧ್ಯತೆಯಿದೆ.

ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಸಾಮ್ರಾಟ್ ಚೌಧರಿ, ವಿಜಯ್ ಕುಮಾರ್ ಸಿನ್ಹಾ ಉಪಮುಖ್ಯಮಂತ್ರಿಯಾಗಲಿದ್ದಾರೆ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.