ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಪಪ್ರಚಾರವನ್ನು ತಿರಸ್ಕರಿಸಿದ ಜನ ಅಭಿವೃದ್ಧಿಗೆ ಮತ ಹಾಕಿದ್ದಾರೆ: ಪ್ರಧಾನಿ ಮೋದಿ

Published 3 ಜುಲೈ 2024, 8:44 IST
Last Updated 3 ಜುಲೈ 2024, 8:44 IST
ಅಕ್ಷರ ಗಾತ್ರ

ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಜನ ಅಪಪ್ರಚಾರವನ್ನು ತಿರಸ್ಕರಿಸಿದ್ದು, ಅಭಿವೃದ್ಧಿಗೆ ಮತ ಹಾಕಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆ ವೇಳೆ ರಾಜ್ಯಸಭೆಯಲ್ಲಿ ಉತ್ತರಿಸಿದ ಮೋದಿ, ದಾರಿತಪ್ಪಿಸುವ ರಾಜಕಾರಣಿಗಳನ್ನು ಜನರು ಸೋಲಿಸಿದ್ದಾರೆ ಎಂದು ಹೇಳಿದ್ದಾರೆ.

ತಮ್ಮ ಪಕ್ಷ ಸಂವಿಧಾನವು ಕೇವಲ ಆರ್ಟಿಕಲ್‌ಗಳ ಸಂಕಲನವಲ್ಲ ಆದರೆ, ಅದರ ಆತ್ಮ ಮತ್ತು ಪದಗಳು ಬಹಳ ಮುಖ್ಯ ಎಂದು ಹೇಳಿದ್ದಾರೆ.

ಸರ್ಕಾರಕ್ಕೆ ಸಂವಿಧಾನ ಒಂದು ಲೈಟ್ ಹೌಸ್ ಇದ್ದಂತೆ ಎಂದು ಹೇಳಿದ್ದಾರೆ.

6 ದಶಕಗಳಲ್ಲಿ 10 ವರ್ಷ ಆಡಳಿತ ನಡೆಸಿದ್ದ ಸರ್ಕಾರವೊಂದು ಮತ್ತೆ ಅಧಿಕಾರಕ್ಕೆ ಬಂದಿದ್ದು ಇದೇ ಮೊದಲಾಗಿದೆ.

ಅಭಿವೃದ್ಧಿ ಹೊಂದಿದ್ದ ಮತ್ತು ಸ್ವಾವಲಂಬಿ ದೇಶವನ್ನಾಗಿ ಮಾಡಿದ್ದಕ್ಕೆ ಬಿಜೆಪಿ ನೇತೃತ್ವದ ಎನ್‌ಡಿಎಗೆ ,ಊರನೇ ಬಾರಿಗೆ ಅಧಿಕಾರ ಸಿಕ್ಕಿದೆ.

ಸದ್ಯ, ಆರ್ಥಿಕತೆಯಲ್ಲಿ ವಿಶ್ವದ 5ನೇ ಸ್ಥಾನದಲ್ಲಿರುವ ದೆಶವನ್ನು ಮೊದಲ ಸ್ಥಾನಕ್ಕೆ ಕೊಂಡೊಯ್ಯಲು ಈ ತೀರ್ಪು ಕೊಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT