ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಆಡಳಿತದಲ್ಲಿ ಜನರು ನಿಜವಾದ ಪ್ರಜಾಪ್ರಭುತ್ವ ಕಂಡಿದ್ದಾರೆ: ಜಿತೇಂದ್ರ ಸಿಂಗ್

Published 26 ಏಪ್ರಿಲ್ 2024, 10:49 IST
Last Updated 26 ಏಪ್ರಿಲ್ 2024, 10:49 IST
ಅಕ್ಷರ ಗಾತ್ರ

ಜಮ್ಮು: ಪ್ರಧಾನಿ ಮೋದಿ ಅವರ ನಾಯಕತ್ವದ ಸರ್ಕಾರದಲ್ಲಿ ದೇಶದ ಜನ ಅದರಲ್ಲೂ ಜಮ್ಮು ಕಾಶ್ಮೀರದ ಜನ ನಿಜವಾದ ಪ್ರಜಾಪ್ರಭುತ್ವವನ್ನು ಕಂಡಿದ್ದಾರೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ ಹೇಳಿದ್ದಾರೆ.

ದೇಶದಲ್ಲಿ ಎರಡನೇ ಹಂತದಲ್ಲಿ 13 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ 88 ಕ್ಷೇತ್ರದಲ್ಲಿ ಇಂದು ಮತದಾನ ನಡೆಯುತ್ತಿದೆ. ಈ ಚುನಾವಣೆಯಲ್ಲಿ ಬಿಜೆಪಿ ಭಾರಿ ಬಹುಮತಗಳಿಸುವ ಮೂಲಕ ಮೂರನೇ ಬಾರಿಗೆ ಬಲಿಷ್ಠ ಸರ್ಕಾರವನ್ನು ರಚಿಸಲಿದೆ ಎಂದರು.

ಜಮ್ಮು ಮತ್ತು ಕಾಶ್ಮಿರ ಲೋಕಸಭಾ ಕ್ಷೇತ್ರದಲ್ಲಿ ಮತಚಲಾವಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ‘2014ರಲ್ಲಿ ಮೋದಿ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಜನರು ನಿಜವಾದ ಪ್ರಜಾಪ್ರಭುತ್ವದ ಅನುಭವವನ್ನು ಪಡೆದಿದ್ದಾರೆ. ವಿಶೇಷವಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಪಂಚಾಯತ್‌ ಮತ್ತು ನಗರ ಸ್ಥಳೀಯ ಸ್ಥಳೀಯ ಚುನಾವಣೆಯನ್ನು ನಡೆಸುವುದರ ಮೂಲಕ ಪ್ರಜಾಪ್ರಭುತ್ವವನ್ನು ಬಲಗೊಳಿಸಲಾಗಿದೆ’ ಎಂದರು.

2014ರ ಮೊದಲು ದೇಶದ ಯುವಕರು ಒಂದು ರೀತಿಯ ಹತಾಶೆಯ ಭಾವನೆಯಲ್ಲಿದ್ದರು. ಹೊಸ ಅವಕಾಶಗಳನ್ನು ಹುಡಕಿ ವಿದೇಶಕ್ಕೆ ತೆರಳುತ್ತಿದ್ದರು. ಆದರೆ ಇಂದು ಪರಿಸ್ಥಿತಿ ಬದಲಾಗಿದೆ. ವಿದೇಶದಲ್ಲಿ ಉದ್ಯೋಗ ಮಾಡುತ್ತಿದ್ದವರು ದೇಶಕ್ಕೆ ವಾಪಸ್ಸಾಗುತ್ತಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT