ಕೋಲ್ಕತ್ತ: ಅತ್ಯಾಚಾರ ಎಸಗಿ, ಹತ್ಯೆ ಮಾಡುವ ದುಷ್ಕರ್ಮಿಗಳನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ತೃಣಮೂಲ ಕಾಂಗ್ರೆಸ್ ಸಂಸದ ಹಾಗೂ ನಟ ದೇವ್ ಹೇಳಿದ್ದಾರೆ.

ದಕ್ಷಿಣ 24 ಪರಗಣ ಜಿಲ್ಲೆಯ ಜಯನಗರ ಪ್ರದೇಶದ ಹಳ್ಳಿಯೊಂದರ ನಿರ್ಜನ ಪ್ರದೇಶದಲ್ಲಿ ಒಂಬತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಲಾಗಿದೆ. ಆಕೆ ಶುಕ್ರವಾರ ಸಂಜೆಯಿಂದಲೇ ನಾಪತ್ತೆಯಾಗಿದ್ದಾಳೆ ಎಂದು ದೂರು ನೀಡಿದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಪೊಲೀಸ್ ಠಾಣೆಗೆ ಗ್ರಾಮಸ್ಥರು ಬೆಂಕಿ ಹಚ್ಚಿದ್ದಾರೆ. ಪೊಲೀಸರ ಮೇಲೂ ಶನಿವಾರ ಕಲ್ಲು ತೂರಾಟ ನಡೆಸಿದ್ದಾರೆ.
.'ನಾಚಿಕೆಯಾಗಬೇಕು' - ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ಗೆ ನೆತನ್ಯಾಹು ತಿರುಗೇಟು.ಪೂಂಚ್: ಪಾಕಿಸ್ತಾನದ ಗನ್ಗಳು, ಚೀನಾ ಗ್ರೆನೇಡ್ ಸೇರಿ ಭಾರಿ ಪ್ರಮಾಣದ ಸ್ಫೋಟಕ ವಶ.
ಈ ಘಟನೆ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ದೇವ್, ಆರೋಪಿಗಳು ತಪ್ಪಿತಸ್ಥರೆಂದು ಗುರುತು ಪತ್ತೆಯಾದ ತಕ್ಷಣ ಅವರನ್ನು ಗುಂಡಿಕ್ಕಿ ಕೊಲ್ಲಬೇಕು. ಅವರನ್ನೂ ಜೈಲಿಗೆ ಕಳುಹಿಸಿ ನಮ್ಮ ತೆರಿಗೆ ಹಣವನ್ನೂ ವ್ಯರ್ಥ ಮಾಡಬಾರದು ಎಂದು ಹೇಳಿದ್ದಾರೆ.

ದೇಶದಲ್ಲಿ ಕಾನೂನು ಬಲಿಷ್ಠವಾಗಿದೆ. ಆದರೂ ನಮ್ಮ ತಾಯಿ ಮತ್ತು ಹೆಣ್ಣು ಮಕ್ಕಳನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
.ದರ್ಶನ್ ಜಾಮೀನು ಅರ್ಜಿ ವಿಚಾರಣೆ: ದೋಷಾರೋಪಪಟ್ಟಿಯ ನ್ಯೂನತೆ ಉಲ್ಲೇಖಿಸಿ ವಕೀಲರ ವಾದ.ತಿರುಪತಿ ಲಾಡು ಗುಣಮಟ್ಟದ ಬಗ್ಗೆ ಭಕ್ತರ ಶ್ಲಾಘನೆ: ಚಂದ್ರಬಾಬು ನಾಯ್ಡು .
ಅತ್ಯಾಚಾರ ಎಸಗುವ ಆರೋಪಿಗಳಿಗೆ ಎಂತಹ ಶಿಕ್ಷೆ ವಿಧಿಸಬೇಕೆಂದರೆ ಭವಿಷ್ಯದಲ್ಲಿ ಯಾರೂ ಇಂತಹ ಕೃತ್ಯಗಳಲ್ಲಿ ಭಾಗಿಯಾಗಬೇಕೆಂಬ ಯೋಚನೆಯೂ ಸುಳಿಯಬಾರದು. ಅಂತಹ ಭಯ ಹುಟ್ಟಿಸಬೇಕು. ಇಲ್ಲದಿದ್ದರೆ ಇಂತಹ ಕೃತ್ಯಗಳನ್ನು ತಡೆಯಲು ಸಾಧ್ಯವಿಲ್ಲ ಎಂದೂ ತಿಳಿಸಿದ್ದಾರೆ.
.Haryana | ಶೇ 61.32ರಷ್ಟು ಮತದಾನ: ಇವಿಎಂ ಸೇರಿದ 1,031 ಅಭ್ಯರ್ಥಿಗಳ ಭವಿಷ್ಯ.ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿಗೆ ಸಮನ್ಸ್ ಜಾರಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.