ಹೈದರಾಬಾದ್: ಹೋಳಿ ಹಬ್ಬದ ಪ್ರಯುಕ್ತ ಬಣ್ಣ ಹಚ್ಚಿದ್ದಕ್ಕೆ ಕೋಪಗೊಂಡ ವ್ಯಕ್ತಿ, ಬಣ್ಣ ಹಾಕಿದ ವ್ಯಕ್ತಿಗೆ ಬೆಂಕಿ ಹಚ್ಚಿರುವ ಭೀಕರ ಘಟನೆ ತೆಲಂಗಾಣದ ಮೇಧಕ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ರೇಗೋಡು ಮಂಡಲದ ಮಾರ್ಪಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹೋಳಿ ಆಚರಣೆ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದೆ.

ತನಗೆ ಬಣ್ಣ ಹಚ್ಚಬೇಡ ಎಂದು ಹೇಳಿದರೂ ವ್ಯಕ್ತಿ ಬಣ್ಣ ಹಚ್ಚಿದ್ದಾನೆ. ಇದರಿಂದ ಕೋಪಗೊಂಡ ವ್ಯಕ್ತಿಯು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸಂತ್ರಸ್ತನಿಗೆ ತೀವ್ರ ಸುಟ್ಟ ಗಾಯಗಳಾಗಿವೆ.

ಗಾಯಗೊಂಡ ವ್ಯಕ್ತಿಯನ್ನು ಹೈದರಾಬಾದ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇವನ್ನೂ ಓದಿ: Video: ವಿದ್ಯುತ್ ತಗುಲಿ ಮೂರು ಆನೆಗಳ ಸಾವು- ಮೃತದೇಹ ಬಿಟ್ಟುಹೋಗದ ಮರಿಯಾನೆಗಳು

ಅಹಮದಾಬಾದ್:ಹೋಳಿ ಸಂಭ್ರಮದಲ್ಲಿ ಆಸ್ಟ್ರೇಲಿಯಾ ಪ್ರಧಾನಿ ಅಲ್ಬನೀಸ್ ಭಾಗಿ

ಚೀನಾ ಗಣಿ ಕುಸಿತ: ರಕ್ಷಣಾ ಕಾರ್ಯಾಚರಣೆ ಸ್ಥಗಿತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.