ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಫ್‌ಐ: ಮತ್ತೆ 19 ಮಂದಿ ವಿರುದ್ಧ ದೋಷಾರೋಪ ಪಟ್ಟಿ

Last Updated 19 ಮಾರ್ಚ್ 2023, 10:54 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ದೇಶದಲ್ಲಿ ಇಸ್ಲಾಮಿಕ್ ಆಡಳಿತ ಸ್ಥಾಪನೆಗೆ ಪಿತೂರಿ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ನಿಷೇಧಿತ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ) ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಐದನೇ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಅದರಲ್ಲಿ ಪಿಎಫ್‌ಐನ 12 ಮಂದಿ ರಾಷ್ಟ್ರೀಯ ಕಾರ್ಯಕಾರಿ ಸದಸ್ಯರೂ ಸೇರಿ 19 ಜನರ ವಿರುದ್ಧ ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಲಾಂ, ರಹಿಮನ್‌, ನಝರುದ್ದೀನ್‌, ಅಹ್ಮದ್‌, ಅಫ್ಸರ್‌ ಪಾಷಾ, ಇ ಅಬುಬಕರ್, ಪ್ರೊ.ಪಿ.ಕೊಯಾ ಮತ್ತು ಮಹಮ್ಮದ್‌ ಆಲಿ ಜಿನ್ಹಾ ಸೇರಿ 19 ಮಂದಿ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಕಾನೂನುಬಾಹಿರ ಚಟುವಟಿಕೆಗಳ (ನಿಯಂತ್ರಣ) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದರೊಂದಿಗೆ ಪಿಎಫ್‌ಐ ಪ್ರಕರಣದಲ್ಲಿ ದೇಶದಾದ್ಯಂತ 105 ಮಂದಿ ವಿರುದ್ಧ ಎನ್‌ಐಎ ಪ್ರಕರಣ ದಾಖಲಿಸಿದಂತಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಪಿಎಫ್‌ಐ ಕಚೇರಿ ಸೇರಿದಂತೆ 39 ಸ್ಥಳಗಳಲ್ಲಿ ಶೋಧ ನಡೆಸಿದ ನಂತರ ಇವರನ್ನು ಬಂಧಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT